ಜಿ 20 ಶೃಂಗಸಭೆಗೆ ಕಪ್ಪುಬಾವುಟದ ಬಿಸಿ

3 years ago

ಬೆಂಗಳೂರು: ನಗರದ ಹೊರವಲಯದಲ್ಲಿ ನಡೆಯುತ್ತಿರುವ ಜಿ 20 ರಾಷ್ಟ್ರಗಳ ಹಣಕಾಸು ವಿಭಾಗದ ಮುಖ್ಯಸ್ಥರ ಶೃಂಗಸಭೆಗೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ರೈತರು ಯತ್ನಿಸಿದ್ದಾರೆ.

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ 22 ದಿನದಿಂದ ಧರಣಿ ಕುಳಿತಿರುವ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಶೃಂಗಸಭೆಗೆ ಕಪ್ಪು ಬಾವುಟ ಪ್ರದರ್ಶಿಸಲು ಹೊರಟಿದ್ದ ರೈತರನ್ನು ಮಾರ್ಗ ಮಧ್ಯೆಯೇ ಪೊಲೀಸರು ಬಂಧಿಸಿದರು.

ಮೆರವಣಿಗೆಯಲ್ಲಿ ತೆರಳುತ್ತಿದ್ದ ರೈತ ಮುಖಂಡರನ್ನು ಹೆಬ್ಬಾಳ ಫ್ಲೈ ಓವರ್  ಬಳಿ  ತಡೆದು ಮುಂದೆ ಹೋಗದಂತೆ ಸೂಚಿಸಲಾಯಿತು. ಈ ವೇಳೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ‌ ಕುರುಬೂರು ಶಾಂತಕುಮಾರ್ ದೇಶಾದ್ಯಂತ ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದು ಮಾಡಬೇಕು, ಕೃಷಿ ಸಾಲ ನೀತಿ ಬದಲಾಗಬೇಕು, ದೇಶದ ಜನರಿಗೆ ಆಹಾರ ಉತ್ಪಾದಿಸುವ ವಲಯವಾದ ಕಾರಣ ಕೃಷಿ ಸಾಲ ಬಡ್ಡಿರಹಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.

ರೈತರ ಮಕ್ಕಳಿಗೆ ವಿದ್ಯಾಭ್ಯಾಸ ಸಾಲ ಬಡ್ಡಿ ರಹಿತವಾಗಿ  ನಿಡಬೇಕು ಎಂಬ ಒತ್ತಾಯಗಳ ಬಗ್ಗೆ ಗಮನ ಸೆಳೆಯಲು ಹೊರಟಿದ್ದ ರೈತರ ತಂಡಗಳನ್ನು ತಡೆದು ಪೊಲೀಸರು ದಬ್ಬಾಳಿಕೆ ಮಾಡಿದ್ದಾರೆಂದು ಆಪಾದಿಸಿದರು.

Leave a Reply