ಕೊಡಗು: ವೇಗವಾಗಿ ಹೋಗುತ್ತಿದ್ದ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಬಲಿಯಾದವರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಕಾರು ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿದ್ದ ನಾಲ್ಕರು ಉಳ್ಳಾಲಕ್ಕೆ ಹೋಗಿ ಹಿಂತಿರುಗುವಾಗ ಎದುರಿಗೆ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ, ಸ್ಥಳದಲ್ಲಿದ್ದ ಕಾರು ಲಾರಿ ತೆರವುಗೊಳಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ.




