ಕೊಪ್ಪಳ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಗೆ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮಟ್ರಿಕ್-ನಂತರದ ವಿದ್ಯಾರ್ಥಿವೇತನ” “ಶುಲ್ಕ ಮರುಪಾವತಿ”ಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಮಾರ್ಚ್ 30 ರವರೆಗೆ ವಿಸ್ತರಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಅರ್ಹ ವಿದ್ಯಾರ್ಥಿಗಳು ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಮಾ.30 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ 8050770005, ಇ-ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಮತ್ತು ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದು.




