ಭಾರತ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ: ಸಿದ್ದರಾಮಯ್ಯ

9 months ago

ದೆಹಲಿ: ಭಾರತ ಸರ್ಕಾರವು ಯೂರಿಯಾ ಮತ್ತಿತರ ರಸಗೊಬ್ಬರಗಳನ್ನು ಎಲ್ಲಾ ರಾಜ್ಯಗಳಿಗೆ ಸರಬರಾಜು ಮಾಡಬೇಕು. ಈ ವರ್ಷ ಭಾರತ ಸರ್ಕಾರವು ಸರಬರಾಜು ಮಾಡಿರುವ ರಸಗೊಬ್ಬರವು ಸಾಕಾಗುತ್ತಿಲ್ಲ. ಏಕೆಂದರೆ  ರಾಜ್ಯದಲ್ಲಿ ಮುಂಗಾರು ಅವಧಿಗೂ ಮುನ್ನವೇ ಪ್ರಾರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಬಿತ್ತನೆ ಈ ವರ್ಷ ಹೆಚ್ಚಾಗಿದೆ. ಜಲಾನಯನ ಪ್ರದೇಶಕ್ಕೆ ನೀರನ್ನು ಈಗಾಗಲೇ ಹಾಯಿಸಲಾಗಿದೆ. ಹಾಗಾಗಿ ರೈತರು ಹೆಚ್ಚು ರಸಗೊಬ್ಬರವನ್ನು ಬಳಸುತ್ತಿದ್ದಾರೆ. ಹಾಗೆಂದು ನಮ್ಮ ಬಳಿ ರಸಗೊಬ್ಬರವಿಲ್ಲ ಎಂದೇನಲ್ಲ. ಆದರೆ ರಾಜ್ಯಕ್ಕೆ ಹೆಚ್ಚಿನ ರಸಗೊಬ್ಬರದ ಅಗತ್ಯವಿದೆ ಎಂದರು.

ಸರ್ಕಾರದ ಬಳಿ ರಸಗೊಬ್ಬರವಿಲ್ಲ ಎಂಬ ತಪ್ಪು ಕಲ್ಪನೆ ರೈತರಲ್ಲಿ  ಮೂಡಿದ್ದು, ಚಳವಳಿ ಪ್ರಾರಂಭಿಸಿದ್ದಾರೆ. ಯೂರಿಯಾ ಮತ್ತಿತರ ರಾಸಾಯನಿಕ ರಸಗೊಬ್ಬರ ಲಭ್ಯವಿದ್ದು, ಹೆಚ್ಚಿನ ಗೊಬ್ಬರದ ಅವಶ್ಯಕತೆ ಇದೆ ಎಂದು ಜೆ. ಪಿ.ನಡ್ಡಾ ಅವರಿಗೆ ಪತ್ರ ಬರೆಯಲಾಗಿದೆ ಎಂದರು.

Leave a Reply