ಮೈಸೂರಿಗೂ ವಿಸ್ತರಿಸಿದ ಭ್ರೂಣ ಹತ್ಯೆ ಪ್ರಕರಣ

2 years ago

#Feticide #case #extended #Mysore

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಭ್ರೂಣ ಪತ್ತೆ ಹಾಗೂ ಹತ್ಯೆಯು ಮೈಸೂರಿನ ಕೇವಲ ಮಾತಾ ಆಸ್ಪತ್ರೆಯಲ್ಲಿ ಮಾತ್ರವಲ್ಲ, ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ನಡೆಯುತ್ತಿತ್ತು ಎನ್ನುವ ಭಯಾನಕ ಸಂಗತಿ ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿದೆ.

ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ ದಂಧೆ ನಡೆಯುತ್ತಿದ್ದು, ಇಲ್ಲಿನ ಹೆಡ್ನರ್ಸ್ ಆಗಿದ್ದ ಉಷಾರಾಣಿ ಎಂಬಾಕೆಯನ್ನು ಬಂಧಿಸಲಾಗಿದೆ. ಬ್ರೋಕರ್ ಪುಟ್ಟರಾಜು ಅಣತಿಯಂತೆ ಮಹಿಳೆಯರಿಗೆ ಗರ್ಭಪಾತ ಮಾಡಲಾಗುತ್ತಿತ್ತು. ಪುಟ್ಟರಾಜು ಮಾತಾ ಆಸ್ಪತ್ರೆ ಹಾಗೂ ಚಾಮುಂಡೇಶ್ವರಿ ಆಸ್ಪತ್ರೆಗೆ ಗರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ. ಬಳಿಕ ಉಷಾರಾಣಿ ಗರ್ಭಿಣಿಯರಿಗೆ ಗರ್ಭಪಾತ ಮಾಡುತ್ತಿದ್ದಳು. ಈ ಹಿನ್ನೆಲೆ ಪೊಲೀಸರು ಉಷಾರಾಣಿಯನ್ನು ಬಂಧಿಸಲಾಗಿದೆ.

ಚಾಮುಂಡೇಶ್ವರಿ ಆಸ್ಪತ್ರೆ ಮಾಲೀಕ ಜಗದೀಶ್ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಜಗದೀಶ್ಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ಚಾಮುಂಡೇಶ್ವರಿ ಆಸ್ಪತ್ರೆ ದಾಖಲಾತಿಗಳನ್ನು ಪೊಲೀಸರಿಗೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.

Leave a Reply