ಕಲಬುರಗಿಯಲ್ಲಿ ಅಕ್ರಮ ಭ್ರೂಣ ಲಿಂಗ ಪತ್ತೆ

4 years ago

ಕಲಬುರಗಿ: ಕಲಬುರಗಿಯಲ್ಲಿ ಅಕ್ರಮವಾಗಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಪ್ರಕರಣ ವರದಿಯಾಗಿದೆ. ಡಿ.ಎಚ್ ಓ ರಾಜಶೇಖರ ಮಾಲಿ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಮನೆಯೊಂದರನ್ನು ಬಾಡಿಗೆಗೆ ಪಡೆದು ಅದರಲ್ಲಿದ್ದ ಭ್ರೂಣಲಿಂಗ ಪರೀಕ್ಷೆ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರ ಮೂಲದ ಉಸ್ಮಾನ್ ಬಾದ್ ಆರೋಗ್ಯ ಇಲಾಖೆ ಸಿಬ್ಬಂದಿ ನೀಡಿದ ಖಚಿತ ಮಾಹಿತಿಯನ್ನು ಆಧರಿಸಿ ನಗರದ ಎಸ್ ಟಿ ಬಿ ಟಿ ಬಳಿ ಮನೆಯೊಂದರ ಮೇಲೆ ದಾಳಿ ನಡೆಸಿ ಆರೋಗ್ಯ ಇಲಾಖೆ ಸಿಬ್ಬಂದಿ ಅಕ್ರಮ ದಂಧೆಯನ್ನು ಪತ್ತೆಹಚ್ಚಿದ್ದಾರೆ.

ಮಹಾರಾಷ್ಟ್ರ ದಿಂದ ಕಲಬುರಗಿಗೆ ಬಂದು ಕೆಲವರು ಭ್ರೂಣಲಿಂಗ ಪರೀಕ್ಷೆ ಮಾಡಿಸಿಕೊಂಡು ಹೋಗಿರುವ ಮಾಹಿತಿ ಸಂಗ್ರಹಿಸಿದ್ದ ಉಸ್ಮಾನ್ ಬಾದ್ ಆರೋಗ್ಯ ಇಲಾಖೆ ಸಿಬ್ಬಂದಿ, ಕಲಬುರಗಿ ಜಿಲ್ಲಾ ಆರೋಗ್ಯ ಇಲಾಖೆಗೆ ಈ ಕುರಿತು ಮಾಹಿತಿ ಕೊಟ್ಟಿದ್ದರು. ಇದರ ಆಧಾರದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.

ದಾಳಿ ವೇಳೆ ಪರೀಕ್ಷಾ ಕೇಂದ್ರದಲ್ಲಿದ್ದ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply