ರಾಜರಾಜೇಶ್ವರಿ ನಗರದಲ್ಲಿ ಜಿದ್ದಾಜಿದ್ದಿನ ಪೈಪೋಟಿ

3 years ago

ರಾಜರಾಜೇಶ್ವರಿ ನಗರ: ಕಾಂಗ್ರೆಸ್ ನಿಂದ ಆಯ್ಕೆಯಾಗಿ ಬಿಜೆಪಿ ಸೇರಿ ಮಂತ್ರಿಯಾಗಿರುವ ಮುನಿರತ್ನ ಈ ಬಾರಿ ಮತ್ತೆ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದಾರೆ. ಶಾಸಕರಾಗಿ ಮತ್ತು ಮಂತ್ರಿ ಆಗಿ ತಾವು ಕೈಗೊಂಡ ಹಲವು ಜನಪರ ಯೋಜನೆಗಳು, ಕೋವಿಡ್ ಸಮಯದಲ್ಲಿ ತಾವು ನೀಡಿದ ನೆರವು ತಮ್ಮ ಕೈ ಹಿಡಿಯಲಿದೆ ಎಂದು ನಂಬಿದ್ದಾರೆ.

ಆದರೆ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಸಮುದಾಯದ ಮತದಾರರು ಕುರುಬ ಮತ್ತು ಅಲ್ಪಸಂಖ್ಯಾತ ಸಮುದಾಯದ ಮತದಾರರು ಇಲ್ಲಿಯವರೆಗೆ ತಮ್ಮ ಗುಟ್ಟು ಬಿಟ್ಟುಕೊಟ್ಟಿಲ್ಲ. ಕಾಂಗ್ರೆಸ್ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಹನುಮಂತ ರಾಯಪ್ಪ ಅವರನ್ನು ಕಣಕ್ಕಿಳಿಸಿದ್ದು, ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಪರವಾಗಿ ಸಂಸದ ಡಿಕೆ ಸುರೇಶ್ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿರುವುದು ಅಖಾಡಕ್ಕೆ ಬಾರಿ ರಂಗು ತಂದು ಕೊಟ್ಟಿದೆ. ಜೆಡಿಎಸ್ ನಿಂದ ಡಾ. ನಾರಾಯಣಸ್ವಾಮಿ ಕನ್ನಡದಲ್ಲಿದ್ದು ತನ್ನ ಸಾಂಪ್ರದಾಯಿಕ ಮತ ಬ್ಯಾಂಕನ್ನು ನೆಚ್ಚಿಕೊಂಡಿದ್ದಾರೆ. ಮೇಲ್ನೋಟಕ್ಕೆ ಸ್ಪರ್ಧೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತ್ರ.

Leave a Reply