ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಕಂಡುಬಂದಲ್ಲಿ ದೂರು ಸಲ್ಲಿಸಿ

1 year ago

ಬಳ್ಳಾರಿ: ಜಿಲ್ಲೆಯಲ್ಲಿ ಬೇಡಿಕೆಯನ್ವಯ ರಸಗೊಬ್ಬರಗಳು ಸರಬರಾಜು ಆಗುತ್ತಿದ್ದು, ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ರಸಗೊಬ್ಬರಗಳನ್ನು ವಿತರಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಕೆ.ಎಂ. ತಿಳಿಸಿದ್ದಾರೆ.

ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಕೃಷಿ ಪರಿಕರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ರೈತರು ರಸಗೊಬ್ಬರ ಖರೀದಿಸುವ ಸಮಯದಲ್ಲಿ ಮಾರಾಟಗಾರರು ಖರೀದಿ ಬಿಲ್‌ನ್ನು ನೀಡದೇ ಇದ್ದಲ್ಲಿ ಅಥವಾ ಕಳಪೆ ಗುಣಮಟ್ಟದ ರಸಗೊಬ್ಬರ ಕಂಡುಬಂದಲ್ಲಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.

Leave a Reply