ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಕೆ ಹರಿಪ್ರಸಾದ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪುನೀತ್ ಕೆರೆಹಳ್ಳಿ ವಾಟ್ಸ್ ಅಪ್ ಸಂಭಾಷಣೆ ಎನ್ನಲಾಗಿರುವ ಫೋಟೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಹರಿಪ್ರಸಾದ್, ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ ಎಂದಿದ್ದಾರೆ.
ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಸಿಟಿ, ಲೂಟಿ, ಯತ್ನಾಳಾದಿಯಾಗಿ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು ಎಂದಿದ್ದಾರೆ.

ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.




