ಹಾಸನ: ರಂಗಸಿರಿ ಹಾಸನ ಮತ್ತು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಎಚ್ ಆರ್ ಸ್ವಾಮಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ ಹಾಗೂ ಭಾನು ಮುಷ್ತಾಕ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ರಾಜ್ಯಸಭಾ ಸದಸ್ಯರು, ಸಾಹಿತಿ ಮತ್ತು ಚಿಂತಕರಾದ ಡಾ. ಎಲ್ ಹನುಮಂತಯ್ಯ ನೆರವೇರಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮೊದಲ ಮಾತುಗಳನ್ನು ಆಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗಸಿರಿ ಹಾಸನ ಸಂಸ್ಥೆಯ ಅಧ್ಯಕ್ಷರಾದ ಕೆ ರಂಗಸ್ವಾಮಿ ವಹಿಸಿಕೊಳ್ಳಲಿದ್ದಾರೆ.

ಕಾರ್ಯಕ್ರಮವು 30 ಡಿಸೆಂಬರ್ ಸೋಮವಾರ ಬೆಳಿಗ್ಗೆ 10.45ಕ್ಕೆ ಗಾಧಿ ಭವನ, ಎಂ ಜಿ ರಸ್ತೆ ಹಾಸನ ಇಲ್ಲಿ ನಡೆಯಲಿದೆ.





