ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.76 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿ: ಅಪ್ಸರ್ ಕೊಡ್ಲಿಪೇಟೆ
ಚಿತ್ರದುರ್ಗ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಚಿತ್ರದುರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಕಛೇರಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಬಾನ್ ಅವರ ಅಧ್ಯಕ್ಷತೆಯಲ್ಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯ ಹಾಗೂ ಜಿಲ್ಲಾ ಉಸ್ತುವಾರಿ ಫಯಾಜ್ ದಾವಣಗೆರೆ ಅವರ ಉಪಸ್ಥಿತಿಯಲ್ಲಿ ಜರುಗಿತು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಈ ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ಮುಖ್ಯವಾದ ವಿಷಯಗಳು ಚರ್ಚಿಸಲ್ಪಟ್ಟವು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರಕ್ಕೆ ದೇಶದಾದ್ಯಂತ ಜಾತಿಗಣತಿ ನಡೆಸಬೇಕೆಂದು ಆಗ್ರಹಿಸುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡರುಗಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸಿದ್ದರಾಮಯ್ಯ ನೇತೃತ್ವದ ಅವರದೇ ಕಾಂಗ್ರೆಸ್ ಸರ್ಕಾರ ಇರುವ ಕರ್ನಾಟಕ ರಾಜ್ಯದಲ್ಲಿ, ಕಳೆದ ಒಂದುವರೆ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ, ಕಾಂತರಾಜ್ ಆಯೋಗದ ಜಾತಿಗಣತಿಯನ್ನು ಏಕೆ ಜಾರಿ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು.
ಸರ್ಕಾರದ ಅಧಿಕೃತ ಅಂಕಿ ಅಂಶಗಳ ಪ್ರಕಾರ ರಾಜ್ಯದ ವಿವಿಧ ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ ಇದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿಯೇ ಸುಮಾರು 4159 ಹುದ್ದೆಗಳು ಖಾಲಿ ಇವೆ. ಹೆಸರಿಗೆ ಮಾತ್ರ ನಾವು ಬಡವರು, ದಲಿತರು, ಅಲ್ಪಸಂಖ್ಯಾತರ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಸರ್ಕಾರ ಕೂಡಲೇ ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಗೀರ್ ಅಹ್ಮದ್, ಜಿಲ್ಲಾ ಕಾರ್ಯದರ್ಶಿ ಸಾದತ್ ಪಾಶ ಜಿಲ್ಲಾ ಸಮಿತಿ ಸದಸ್ಯರಾದ ಕಾಮರಾನ್ ಅಲಿ ಹಾಗೂ ಇತರ ಜಿಲ್ಲಾ ಸಮಿತಿಯ ಸದಸ್ಯರು ಹಾಜರಿದ್ದರು.




