ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪೆಹಲ್ಗಾಮ್ ಘಟನೆ ಮುಂದಿಟ್ಟುಕೊಂಡು ಆಕ್ಷೇಪಾರ್ಹ ಸಂದೇಶ ಹಂಚಿಕೊಂಡ ವೈದ್ಯೆ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಡಾ.ಅತೀಫಾ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 353 (ಕಿಡಿಗೇಡಿತನದ ಬರಹ ಪ್ರಕಟಿಸುವುದು) ಹಾಗೂ ಸೆಕ್ಷನ್ 196 (ಧರ್ಮಗಳ ನಡುವೆ ದ್ವೇಷ ಹಬ್ಬಿಸಲು ಯತ್ನಿಸುವುದು) ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.
ಆಕ್ಷೇಪಾರ್ಹ ಸಂದೇಶ ಹಂಚಿಕೊಂಡ ವೈದ್ಯೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿದ್ದೇವೆ. ಸಂದೇಶ ಹಂಚಿಕೊಳ್ಳಲು ಬಳಸಿದ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದು, ಪರಿಶೀಲನೆಗಾಗಿ ವಿಧಿವಿಜ್ಞಾನ ತಜ್ಞರಿಗೆ ಕಳುಹಿಸಿದ್ದೇವೆ ಎಂದರು.
ವೈದ್ಯೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಬರಹವನ್ನು ವಿಶ್ವ ಹಿಂದೂ ಪರಿಷತ್ನ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್ವೆಲ್ ಫೇಸ್ಬುಕ್ನಲ್ಲಿ ಈಚೆಗೆ ಹಂಚಿಕೊಂಡಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಬರಹವನ್ನು ಹಂಚಿಕೊಂಡ ವೈದ್ಯೆ ಸಂಸ್ಥೆಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಹೈಲ್ಯಾಂಡ್ ಆಸ್ಪತ್ರೆ ಅವರನ್ನು ಕೆಲಸದಿಂದ ವಜಾಮಾಡಿದೆ. ಈ ಘಟನೆ ಕುರಿತು ಸ್ಪಷ್ಟನೆ ನೀಡಿ ಹೈಲ್ಯಾಂಡ್ ಆಸ್ಪತ್ರೆ ಆಡಳಿತ ಮಂಡಳಿ ಟ್ವೀಟ್ ಮಾಡಿದ್ದು, ‘ದೇಶವಿರೋಧಿ ಎಂದು ಪರಿಗಣಿಸುವಂತಹ ಅಭಿಪ್ರಾಯಗಳನ್ನು ನಮ್ಮ ಸಂಸ್ಥೆಯ ಒಪ್ಪುವುದಿಲ್ಲ. ವೈದ್ಯೆ ತಮ್ಮ ಬರಹದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಅದನ್ನು ನಾವೂ ಬಲವಾಗಿ ಖಂಡಿಸುತ್ತೇವೆ. ಇಂತಹ ದೇಶ ವಿರೋಧಿ ಭಾವನೆಗಳಿಂದ ನಾವು ಅಂತರ ಕಾಯ್ದುಕೊಳ್ಳುವ ಮೂಲಕ ದೇಶದ ಸಾರ್ವಭೌಮತೆ, ಐಕ್ಯತೆ ಹಾಗೂ ಭದ್ರತೆಯನ್ನು ಎತ್ತಿಹಿಡಿಯುತ್ತೇವೆ’ ಎಂದಿದೆ.




