ಬೆಂಗಳೂರು: ಯುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಸತ್ಪ್ರಜೆಗಳನ್ನು ರೂಪಿಸುವ ಕಾಯಕದಲ್ಲಿ ತೊಡಗಬೇಕಾದ ಬೆಂಗಳೂರು ವಿಶ್ವವಿದ್ಯಾಲಯದ ಉಪನ್ಯಾಸಕರು ಲೈಂಗಿಕ ಕಿರುಕುಳ, ಮಾರ್ಕ್ಸ್ ಕೊಡಲು ಲಂಚಕ್ಕೆ ಬೇಡಿಕೆ ಮತ್ತು ವಿಶ್ವವಿದ್ಯಾಲಯದ ಆವರಣದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಉಪನ್ಯಾಸಕರ ಈ ವರ್ತನೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ವಿಧ್ಯಾರ್ಥಿ, ಪೋಷಕರು ಹಾಗೂ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿರುವ ನಡುವೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಖಾಯಂ ಸೇವೆಯಲ್ಲಿರುವ ಉಪನ್ಯಾಸಕರು ಅತಿಥಿ ಉಪನ್ಯಾಸಕಿಗೆ ಕಿರುಕುಳ ಆರೋಪ ಹಿನ್ನಲೆಯಲ್ಲಿ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿವಿಧ ಸಂದರ್ಭಗಳಲ್ಲಿ ಅತಿಥಿ ಉಪನ್ಯಾಸಕಿಗೆ ಐವರು ಉಪನ್ಯಾಸಕರು ಲೈಂಗಿಕ ಕಿರುಕುಳ ನೀಡಿದ್ದು, ಜ್ಞಾನಭಾರತಿ ಆವರಣದಲ್ಲೇ ಇಂತಹ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ ಐವರು ಉಪನ್ಯಾಸಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಫ್ ಐಆರ್ ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕುಡಿದು ಮತ್ತರಾಗಿ ಬೇಕಾಬಿಟ್ಟಿ ವರ್ತಿಸಿದ, ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ. ಮದ್ಯ ಸೇವಿಸಿ ಅತಿಥಿ ಉಪನ್ಯಾಸಕ ರಾಮಾಂಜನೇಯ ಶರ್ಟ್ ಬಿಚ್ಚಿ ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಡ್ಯಾನ್ಸ್ ಮಾಡಿದ್ದಾನೆ. ಇಂತಹ ಹಲವು ಆರೋಪಗಳು ಉಪನ್ಯಾಸಕ ರಾಮಾಂಜನೇಯ ವಿರುದ್ಧ ಕೇಳಿಬಂದಿವೆ.
ಕಣ್ಣು ಕಾಣದ ವಿದ್ಯಾರ್ಥಿನಿಗೆ ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಈತನ ಮೇಲೆ ಆರೋಪಿಸಲಾಗಿದೆ. ನೇತ್ರಾನಂದ ಎಂಬ ಅಂಧ ವಿದ್ಯಾರ್ಥಿನಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿನಿ ಜೊತೆಗೆ ಕುಡಿದು ನೃತ್ಯ ಮಾಡಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯನ್ನು ಎತ್ತಿಕೊಂಡು ಉಪನ್ಯಾಸಕ ನೃತ್ಯ ಮಾಡಿರುವ ವಿಡಿಯೋ ಸಹ ವೈರಲ್ ಆಗಿದೆ.
ಜವಾಬ್ದಾರಿಯಿಂದ ವರ್ತಿಸಬೇಕಾದ ಉಪನ್ಯಾಸಕರು ಬೇಜವಾಬ್ದಾರಿಯಿಂದ ವರ್ತಿಸುವ ಘಟನೆಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಹೆತ್ತವರು ಆತಂಕ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.




