“ಕೈಲಾಗದವನು ಮೈಪರಚಿಕೊಂಡ” ಎಂಬಂತೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಗೆ ಕಾರಣರಾದ ಮತಾಂಧರನ್ನು ಪತ್ತೆ ಹಚ್ಚಿ ಅವರ ಹೆಡೆಮುರಿ ಕಟ್ಟಬೇಕಾದ ಗೃಹ ಸಚಿವ @DrParameshwara ಅವರು ವಿಪಕ್ಷ ನಾಯಕರ ಮೇಲೆ FIR ಹಾಕಿರುವುದು ಹೇಡಿತನದ ಪರಮಾವಧಿ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಸಮರ್ಥ ಗೃಹ ಸಚಿವ @DrParameshwara ಅವರೇ, ಕಳೆದ ಬುಧವಾರ ರಾತ್ರಿ ಬೆಂಗಳೂರಿನಿಂದ ಕೇವಲ 130 ಕಿಮೀ ದೂರದಲ್ಲಿರುವ ನಾಗಮಂಗಲದಲ್ಲಿ ರಾಜ್ಯವೇ ಬೆಚ್ಚಿಬೀಳುವಂತಹ ಘಟನೆ ನಡೆದು ಒಂದು ವಾರ ಕಳೆದಿದ್ದರೂ ಈವರೆಗೂ ತಾವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಕೆಲಸ ಮಾಡಿಲ್ಲ. ಘಟನಾ ಸ್ಥಳಕ್ಕೆ ಹೋಗಿ ಅಲ್ಲಿ ಆಸ್ತಿ-ಪಾಸ್ತಿ ಕಳೆದುಕೊಂಡು, ಭಯಭೀತರಾಗಿರುವ ಸ್ಥಳೀಯರ ಅಳಲು, ದುಮ್ಮಾನ, ಆತಂಕ, ಆಕ್ರೋಶ ಕೇಳಿದ್ದಿದ್ದರೆ ತಮಗೆ ಪರಿಸ್ಥಿತಿಯ ಗಂಭೀರತೆ ಅರ್ಥವಾಗುತ್ತಿತ್ತು. ಆದರೆ ತಮಗೆ ಕರ್ತವ್ಯ ಪ್ರಜ್ಞೆಯೇ ಇಲ್ಲ.
ನನ್ನ ಮೇಲೆ ಎಫ್ಐಆರ್ ಹಾಕಿ ಏನು ಸಾಧಿಸಲು ಹೊರಟಿದ್ದೀರಿ? ನಾನು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು, ಪತ್ರಕರ್ತರು ವ್ಯಕ್ತಪಡಿಸಿರುವ ಅನುಮಾನವನ್ನ ನನ್ನ X ಖಾತೆ ಪೋಸ್ಟ್ ಮೂಲಕ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇನೆಯೇ ಹೊರತು, ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ.
ಇಷ್ಟಕ್ಕೂ ಎಫ್ಐಆರ್ ಹಾಕಿರುವ ಪೊಲೀಸರು ನನ್ನ ಪೋಸ್ಟ್ ನಲ್ಲಿರುವ ಮಾಹಿತಿಯನ್ನ ಪೂರ್ತಿಯಾಗಿ ಓದಿದ್ದಾರೋ ಇಲ್ಲವೋ ಅಥವಾ ಅವರಿಗೆ ಕನ್ನಡ ಸರಿಯಾಗಿ ಬರುತ್ತೋ ಇಲ್ಲವೋ ಅರ್ಥವಾಗುತ್ತಿಲ್ಲ.
ನಾನು ಹಂಚಿಕೊಂಡಿರುವ ದೃಶ್ಯಾವಳಿಗಳು ಚಿಕ್ಕಮಗಳೂರಿನಲ್ಲಿ ಮತಾಂಧರು ಪ್ಯಾಲೆಸ್ಟೈನ್ ಧ್ವಜ ಹಿಡಿದು ಮಾಡಿದ ಪುಂಡಾಟಿಕೆ, ದಾವಣಗೆರೆಯಲ್ಲಿ ಕೇಸರಿ ಧ್ವಜ ಹಾರಿಸಿದ ಹಿಂದೂಗಳ ಮೇಲೆ ಮತಾಂಧರು ಹಲ್ಲೆ ಮಾಡಿರುವ ಘಟನೆಗಳದ್ದು. ನನ್ನ ಪೋಸ್ಟ್ ನಲ್ಲಿ ನಾನು ಉಲ್ಲೇಖ ಮಾಡಿರುವುದೂ ಅದನ್ನೇ.
ರಾಜ್ಯದ ಅನೇಕ ಕಡೆಗಳಲ್ಲಿ ಗಣೇಶೋತ್ಸವವನ್ನೇ ಗುರಿಯಾಗಿಟ್ಟುಕೊಂಡು ನಡೆದಿರುವ ಇಂತಹ ಪ್ರಚೋದನಕಾರಿ ಘಟನೆಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ಕೈವಾಡ ಇರಬಹುದು ಎಂದು ಜವಾಬ್ದಾರಿಯುತ ಪ್ರತಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇನೆಯೇ ಹೊರತು ನಾನು ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ.
ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿರುವ ದೃಶ್ಯಗಳು, ಕಲ್ಲು ಎಸೆದಿರುವ ದೃಶ್ಯಗಳು, ವಾಹನ, ಅಂಗಡಿಗಳನ್ನ ಧ್ವಂಸ ಮಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ ಇದೊಂದು ‘ಸಣ್ಣ’ ಘಟನೆ, ‘ಆಕಸ್ಮಿಕ’ ಘಟನೆ ಎಂದು ಜನರಿಗೆ ಸುಳ್ಳು ಮಾಹಿತಿ ನೀಡಿದ್ದಕ್ಕೆ ಅಸಲಿಗೆ ಗೃಹ ಸಚಿವ ಪರಮೇಶ್ವರ್ ಅವರ ಮೇಲೆ ಮೊದಲು FIR ದಾಖಲಿಸಬೇಕು. ಸಚಿವರಿಗೆ ತಪ್ಪು ಮಾಹಿತಿ ನೀಡಿದ ಪೊಲೀಸರ ಮೇಲೆ ಎಫ್ಐಆರ್ ಹಾಕಬೇಕು.
ಕೋಮುಗಲಭೆಗಳನ್ನ ತಡೆಯಲಾಗದ ನಾಲಾಯಕ್ ಸರ್ಕಾರ, ಮತಾಂಧರ ಹೆಡೆಮುರಿ ಕಟ್ಟಲಾಗದ ನಿಸ್ತೇಜ ಸರ್ಕಾರ ನನ್ನ ಮೇಲೆ ಎಫ್ಐಆರ್ ಹಾಕಿರುವುದು ಹೇಡಿತನದ ಲಕ್ಷಣ.
ನಮ್ಮ ದೇಶ, ಧರ್ಮದ ರಕ್ಷಣೆ ವಿಚಾರದಲ್ಲಿ, ಹಿಂದೂಗಳ ರಕ್ಷಣೆ ವಿಚಾರದಲ್ಲಿ, ಹಿಂದೂಗಳ ಹಬ್ಬ, ಉತ್ಸವಗಳ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ, ರಾಮಜನ್ಮಭೂಮಿ ಹೋರಾಟದ ಸಂದರ್ಭದಲ್ಲಿ ದೇಶಕ್ಕಾಗಿ ಧರ್ಮಕ್ಕಾಗಿ ಜೈಲು ವಾಸ ಅನುಭವಿಸಿದವನು ನಾನು. ಇಂತಹ ಒಂದಲ್ಲ ನೂರು ಎಫ್ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




