ಅನುಮತಿ ಇಲ್ಲದೆ ಡಿಕೆಶಿ ಮಕ್ಕಳ ವಿಡಿಯೋ ಪ್ರಸಾರ: ಯೂಟ್ಯೂಬ್ ವಾಹಿನಿಗಳ ವಿರುದ್ಧ FIR

3 years ago

ಬೆಂಗಳೂರು: ಅನುಮತಿ ಇಲ್ಲದೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಡಿ.ಕೆ.ಶಿವಕುಮಾರ್ ಕಚೇರಿ ಸಿಬ್ಬಂದಿ ಉಮೇಶ್ ಎಂಬುವರ ದೂರು ಆಧರಿಸಿ ಎಫ್ ಐ ಆರ್ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು ಹೂ ಇಸ್ ಅಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಅನುಮತಿ ಇಲ್ಲದೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿರುವ ಹಿನ್ನೆಲೆಯಲ್ಲಿ ಐಟಿ ಅಕ್ಟ್ ನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಉಮೇಶ್ ದೂರು ನೀಡಿದ್ದರು.
ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿದೆ.

ಈ ರೀತಿ ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply