ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿ ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ಮುಂಜಾನೆ 5:10ಕ್ಕೆ ಕೆಎ57 ಎಫ್ 4568 ಹೋಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಸುಮಾರು 75 ಪ್ರಯಾಣಿಕರಿದ್ದರು.
ಚಲಿಸುತ್ತಿದ್ದ ಬಸ್ ಮಾರ್ಗ ಮಧ್ಯದ ಹೆಚ್ಎಎಲ್ ಮುಖ್ಯದ್ವಾರದ ಬಳಿ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ, ನಿರ್ವಾಹಕರು ಬಸ್ ನಿಲ್ಲಿಸಿ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.
ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ಕೆಲ ಕ್ಷಣದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ 75 ಪ್ರಯಾಣಿಕರು ಪಾರಾಗಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಅಧಿಕಾರಿಗಳು ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.




