ಬೆಂಗಳೂರು: ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಮೃತಪಟ್ಟವರನ್ನು ರೋಷನ್, ಉದಯ್ ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬ ಪೇಂಟರ್, ಮತ್ತೊಬ್ಬರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು. ಕಡಬಗೆರೆ ಕ್ರಾಸ್ನಲ್ಲಿ ಸತೀಶ್ ಎಂಬುವರು ನಾಲ್ಕು ಅಂತಸ್ತಿನ ಮನೆ ನಿರ್ಮಾಣ ಮಾಡಿಸುತ್ತಿದ್ದು, ಕೆಲ ಕಾರ್ಮಿಕರು ಈ ಕಟ್ಟಡದಲ್ಲೇ ಅಡುಗೆ ಮಾಡಿಕೊಂಡು ಅಲ್ಲೇ ವಾಸವಿದ್ದರು.
ಮಧ್ಯಾಹ್ನ ಈ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಕ್ಕಪಕ್ಕದವರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ದಾವಿಸಿದ ಸಿಬ್ಬಂದಿ ಬೆಂಕಿ ನಂದಿಸಿದರು. ಆದರೂ ಅಷ್ಟರಲ್ಲಾಗಲೇ ಇಬ್ಬರು ಸಜೀವ ದಹನವಾಗಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಡುಗೆಗೆ ಬಳಸುತ್ತಿದ್ದ ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡು ಅಗ್ನಿ ಅವಘಡ ಸಂಭವಿಸಿರಬಹುದೇ ಅಥವಾ ವೆಲ್ಡಿಂಗ್ ಮಾಡುವಾಗ ಬೆಂಕಿ ಕಿಡಿಯಿಂದ ಈ ಘಟನೆ ನಡೆದಿದೆಯೇ ಎಂಬ ಬಗ್ಗೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.




