ಬಳ್ಳಾರಿ: ಜೀವಗಳನ್ನು ಉಳಿಸಲು, ಅನಾರೋಗ್ಯವನ್ನು ತಡೆಗಟ್ಟಲು ಹಾಗೂ ವೃತ್ತಿಪರ ವೈದ್ಯಕೀಯ ಸಹಾಯ ಉತ್ತೇಜಿಸಲು ಪ್ರಥಮ ಚಿಕಿತ್ಸೆ ನಿರ್ಣಾಯಕವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ನ ಜಿಲ್ಲಾ ಶಾಖೆಯ ಎಂ.ಎ ಶಕೀಬ್ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ವಿವಿಯ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಆಯೋಜಿಸಿದ್ದ “ಪ್ರಥಮ ಚಿಕಿತ್ಸಾ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಥಮ ಚಿಕಿತ್ಸೆಯು ಆರೋಗ್ಯ ಕಾಪಾಡುವಲ್ಲಿ ಬಹಳ ಪ್ರಮುಖವಾಗಿದೆ. ಆಕಸ್ಮಿಕವಾಗಿ ಕಾಯಿಲೆಗಳು ಅಥವಾ ಗಾಯಗಳಿಗೆ ತಕ್ಷಣದ ಸಹಾಯದ ಮಹತ್ವ ತಿಳಿಯಬೇಕು. ಇದರಿಂದ ತುರ್ತು ಪರಿಸ್ಥಿತಿಯನ್ನು ಹತೋಟಿಗೆ ತರಬಹುದು ಎಂದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿ ಪ್ರೊ. ಎಂ ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ರಕ್ತ ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನಿರ್ದಿಷ್ಟ ಪರಿಸ್ಥಿತಿಯನ್ನು ಆಧರಿಸಿ ಪ್ರಥಮ ಚಿಕಿತ್ಸೆಯನ್ನು ನೀಡಬೇಕು. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆಯ ಜ್ಞಾನ ಹೊಂದಿರಬೇಕು ಎಂದರು.
ಕುಲಸಚಿವ ನಾಗರಾಜು.ಸಿ ಮಾತನಾಡಿ, ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆಯ ವಿವಿಧ ಆಯಾಮಗಳನ್ನು ಕಲಿತುಕೊಂಡು ಬೇರೆಯವರಿಗೂ ಕಲಿಸುವ ಕಾರ್ಯವನ್ನು ಮಾಡಬೇಕಾಗಿದೆ. ಪ್ರಥಮ ಚಿಕಿತ್ಸೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ವಿದ್ಯಾರ್ಥಿ ಕಲ್ಯಾಣ ಘಟಕ ನಿರ್ದೇಶಕ ಡಾ.ಶಶಿಕಾಂತ ಎಚ್ ಮಜಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.




