• ಪ್ರಜಾಪ್ರಭುತ್ವದ ಮೇಲೆ ಸರ್ಜಿಕಲ್ ಸ್ಟ್ರೈಕ್ ಎಂದ ಸಚಿವ
• ಬಿಜೆಪಿ ನಾಯಕರಿಂದ ಅಧಿಕಾರಿಗಳ ದುರ್ಬಳಕೆ ಆರೋಪ
• ಪ್ರಕರಣದ ತನಿಖೆಗೆ ಸಚಿವ ಕೃಷ್ಣ ಬೈರೇಗೌಡರಿಂದ ಆಗ್ರಹ
ಬೆಂಗಳೂರು: ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ರೂ. 2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್ ನೀಡಿ, ಹಣವನ್ನೂ ಬಿಜೆಪಿ ಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು? ಎಂದು ಅವರು ಪ್ರಶ್ನಿಸಿದರು.
ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ ಮಾರ್ಚ್ 27 ರಂದೇ ರೂ.5 ಕೋಟಿ ಹಣವನ್ನು ಕೆನರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸಾಚಾತನ ಹೊಂದಿವೆ. ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಠ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಲದೆ, ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸಾಚಾತನದ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ ಬೆಳಕಿನ ವೇಗದಲ್ಲಿ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ. ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ? ಅಧಿಕಾರಿಗಳ ಇಂತಹ ವರ್ತನೆ ಚುನಾವಣೆ ಕಾನೂನು ಅಡಿ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದರು.
ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಆದರೆ, ಈ ವಿಚಾರ ನಮ್ಮ ಅಧಿಕಾರಿಗಳಿಗೆ ಗೊತ್ತಿಲ್ಲದೆ ಹೋದದ್ದು ದುರಾದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿತವಾಗಿಯೇ ಮಾಹಿತಿ ನೀಡದೆ ಹೀಗೆ ರೂ. 2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ? ಎಂದು ಅವರು ಪ್ರಶ್ನಿಸಿದರು.
ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.




