ದಾವಣಗೆರೆ: ಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಚನ್ನಗಿರಿ ತಾಲ್ಲೂಕು ಶಾಂತಿಸಾಗರ ಜಲಾಶಯದಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ಧಿ ಚಟುವಟಿಕೆ ನಡೆಸುವುದರಿಂದ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಈ ನಿಷೇಧವನ್ನು ಉಲ್ಲಂಘಿಸಿ ಮೀನು ಹಿಡುವಳಿ ಮಾಡಿದಲ್ಲಿ ನಿಯಮಾನುಸಾರ ಕಾನೂನು ಜರುಗಿಸಲಾಗುವುದು ಎಂದು ಶಾಂತಿಸಾಗರದ ಮೀನುಮರಿಪಾಲನ ಕೇಂದ್ರದ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



