ವಿಜಯಪುರ: ಜೂನ್ 1ರಿಂದ ಬೀದರ್ ಗೆ, ಜೂನ್ 10ರಿಂದ ಕಲಬುರಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಲ್ಯಾಣ ಕರ್ನಾಟಕ ಭಾಗದ ಬೀದರ್ ಹಾಗೂ ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆ ಪುನಾರಂಭಿಸಲಾಗುವುದು ಎಂದಿದ್ದಾರೆ.
ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು ಬೆಂಗಳೂರು-ಬೀದರ್-ಬೆಂಗಳೂರು ಹಾಗೂ ಬೆಂಗಳೂರು-ಕಲಬುರಗಿ- ಬೆಂಗಳೂರು ಮಾರ್ಗಗಳಲ್ಲಿ ವಿಮಾನ ಸೇವೆ ಒದಗಿಸಲಿದ್ದು, ಈ ಸೇವೆಗೆ ಬೆಂಬಲವಾಗಿ ರಾಜ್ಯ ಸರ್ಕಾರವು ₹28.47 ಕೋಟಿ ಮೊತ್ತವನ್ನು ‘ವಯಬಿಲಿಟಿ ಗ್ಯಾಪ್ ಫಂಡಿಂಗ್’ ರೂಪದಲ್ಲಿ ನೀಡುತ್ತಿದೆ. ಎರಡೂ ಮಾರ್ಗಗಳ ವಿಮಾನ ಪ್ರಯಾಣಕ್ಕೆ ಈಗಾಗಲೇ ಮುಂಗಡ ಬುಕ್ಕಿಂಗ್ ಸಹ ಆರಂಭವಾಗಿದೆ ಎಂದಿದ್ದಾರೆ.

ಕಲಬುರಗಿಯ ವಿಮಾನ ಸೇವೆ ನಷ್ಟದ ಕಾರಣದಿಂದ ಸ್ಥಗಿತಗೊಂಡಿದ್ದರೆ, ಬೀದರ್ ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವಿಶೇಷ ನೆರವಿನಿಂದ ಸೀಮಿತ ವಿಮಾನ ಸೇವೆ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಕೈಗಾರಿಕೆ, ಶಿಕ್ಷಣ, ಪ್ರವಾಸೋದ್ಯಮ, ಕೃಷಿ ಹಾಗೂ ವಾಣಿಜ್ಯ ಚಟುವಟಿಕೆಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಾದೇಶಿಕ ವಿಮಾನಯಾನ ಸಂಪರ್ಕ ಯೋಜನೆಯಡಿ ಸರ್ಕಾರವು ವಿಮಾನ ಸೇವೆಯನ್ನು ಮತ್ತೊಮ್ಮೆ ಆರಂಭಿಸುತ್ತಿದೆ ಎಂದಿದ್ದಾರೆ.
ಈ ನಿರ್ಧಾರವು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡಲಿದ್ದು, ಉದ್ಯಮ, ಹೂಡಿಕೆ ಮತ್ತು ಜನಸಂಪರ್ಕ ವೃದ್ಧಿಗೆ ಮಹತ್ವದ ಉತ್ತೇಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.




