ಧಾರವಾಡ: ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ನಗರದ ಕಲಾಭವನ ಎದುರಿಗೆ ಇರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೇರಿದಂತೆ ಗಣ್ಯರಿಂದ ಮಾಲಾರ್ಪಣೆ, ಪುಷ್ಪಾರ್ಚನೆ ಕಾರ್ಯಕ್ರಮ ಜರುಗಿತು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ನಂತರ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಿ, ನಮಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ತಹಶಿಲ್ದಾರ ಡಿ.ಎಚ್.ಹೂಗಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಸಮಾಜದ ಪ್ರಮುಖರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.



