ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಈಶಾನ್ಯ ವಿಭಾಗದ ಪೊಲೀಸರು ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿ 3 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನೈಜೀರಿಯಾ ಪ್ರಜೆ ಪೇಪೆ ಮೋರೆಪೇಯಿ(43) ಬಂಧಿತ ಡ್ರಗ್ ಪೆಡ್ಲರ್ ಆಗಿದ್ದಾನೆ. ವ್ಯಾಪಾರಿ ವೀಸಾದಲ್ಲಿ ನಗರಕ್ಕೆ ಬಂದು ಹೆಬ್ಬಾಳದ ಟಾಟಾನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಆರೋಪಿಯು ಸಿದ್ದ ಉಡುಪುಗಳ ಮಾರಾಟದಲ್ಲಿ ತೊಡಗಿರುವುದಾಗಿ ಹೇಳುತ್ತಿದ್ದ.
ಮೇಲ್ನೋಟಕ್ಕೆ ಒಂದೆರಡು ಬಟ್ಟೆಗಳನ್ನು ಇಟ್ಟುಕೊಂಡು ಅದನ್ನು ರಫ್ತು ಮಾಡುವುದಾಗಿ ಹೇಳುತ್ತಿದ್ದ ಈತ ಸುಲಭವಾಗಿ ಹಣಗಳಿಸಲು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಮೇ 20ರಂದು ಅಮೃತಹಳ್ಳಿಯ ದಾಸರಹಳ್ಳಿಯಲ್ಲಿನ ನಾರ್ಥ್‍ಹಿಲ್ಸ್ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಎಂಡಿಎಂಎ ಕ್ರಿಸ್ಟಲ್‍ಗಳನ್ನು ಯವಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನಿಂದ 3 ಕೋಟಿ ಮೌಲ್ಯದ 3 ಕೆಜಿ ಎಂಡಿಎಂಎ ಕ್ರಿಸ್ಟಲ್‍ನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯಲ್ಲಿ ಆರೋಪಿ 2023ನೇ ಸಾಲಿನಲ್ಲಿ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದು ಎಂಡಿಎಂಎ ಕ್ರಿಸ್ಟಲ್‍ನ್ನು ಕಮ್ಮನಹಳ್ಳಿಯ ಮತ್ತೋರ್ವ ವಿದೇಶಿ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಖರೀದಿಸಿ,ಬಟ್ಟೆ ವ್ಯಾಪಾರ ಮಾಡುವ ನೆಪದಲ್ಲಿ ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ.




