ಹಾಸನ: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲ್ಲೂಕಿನ ಬನವಾಸೆಯ ಆಕಾಶವಾಣಿ ಟವರ್ ಬಳಿ ನಡೆದಿದೆ. ಕಾಡಾನೆಗೆ ಅಂದಾಜು 25 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಈ ಆನೆ ಆಹಾರ ಅರಸಿ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಬಂದಿದೆ. ಈ ವೇಳೆ ಅಲ್ಲೇ ಹಾದು ಹೋಗಿರುವ ವಿದ್ಯುತ್ ತಂತಿ ಆನೆಗೆ ತಾಕಿದ್ದು, ಸ್ಥಳದಲ್ಲೇ ಸಾವನ್ನಪ್ಪಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಜಪಡೆ ದಾಳಿಯಿಂದ ಭತ್ತದ ಗದ್ದೆ ನಾಶ ಮತ್ತೊಂದಡೆ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಇದೇ ಸಕಲೇಶಪುರ ತಾಲೂಕಿನ ಮಲಗಳ್ಳಿ ಗ್ರಾಮದ ಭತ್ತದ ಗದ್ದೆಗಳಿಗೆ ಇಂದು ಮುಂಜಾನೆ ಕಾಡಾನೆಗಳ ಹಿಂಡು ನುಗ್ಗಿದೆ. ಆನೆಗಳು ಭತ್ತದ ಬೆಳೆಯನ್ನು ತುಳಿದು, ತಿಂದು ನಾಶ ಮಾಡಿವೆ. ಗ್ರಾಮದ ಹೂವಣ್ಣ, ರುದ್ರಯ್ಯ, ಚಿನ್ನಪ್ಪ, ಹೇಮಂತ್, ಉಮೇಶ್ ಎಂಬುವವರಿಗೆ ಸೇರಿದ ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿವೆ.




