ಬೆಂಗಳೂರು: ಮಲಯಾಳಂ ಮತ್ತು ತೆಲುಗು ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಇಂತಹ ಆರೋಪಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ಆಯೋಗ ರಚಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ನಿರ್ದೇಶಕಿ ಕವಿತಾ ಲಂಕೇಶ್ ನೇತೃತ್ವದ ಫೈರ್ ಸಂಸ್ಥೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ತನಿಖೆಗೆ ಆಯೋಗ ರಚಿಸಬೇಕು ಎಂದು ಮನವಿ ಮಾಡಿದೆ.
ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರ ಅನೇಕ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇವೆ ಎಂದು ಕವಿತಾ ಲಂಕೇಶ್ ತಿಳಿಸಿದ್ದಾರೆ.
ಲಿಂಗ ಸಮಾನತೆ ಬೆಂಬಲಿಸುವ ಕನ್ನಡ ಚಲನಚಿತ್ರೋದ್ಯಮ ಮತ್ತು ವಿವಿಧ ಕ್ಷೇತ್ರಗಳ 153 ಗಣ್ಯರು ಈ ಮನವಿ ಪತ್ರಕ್ಕೆ ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ ಎಂದರು.
ಎಲ್ಲ ಮಹಿಳಾ ಕಲಾವಿದರಿಗೆ ತಾರತಮ್ಯವಿಲ್ಲದಂತೆ, ಆರೋಗ್ಯಯುತವಾದ ಕೆಲಸದ ವಾತಾವರಣ ಸೃಷ್ಟಿಸಲು ಅಗತ್ಯ ನೀತಿಗಳನ್ನು ರೂಪಿಸಬೇಕು. ಚಿತ್ರೀಕರಣ ಸ್ಥಳದಲ್ಲಿ ಕಲಾವಿದೆಯರಿಗೆ ಸುರಕ್ಷತೆ ಮತ್ತು ಕನಿಷ್ಠ ಸವಲತ್ತುಗಳನ್ನು ಒದಗಿಸಬೇಕು ಎಂದು ಪತ್ರದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ.
ಕವಿತಾ ಲಂಕೇಶ್ ಅಧ್ಯಕ್ಷತೆಯ ಸಂಸ್ಥೆಯ ಈ ನಡೆಗೆ ನಟರಾದ ಸುದೀಪ್, ಕಿಶೋರ್, ದಿಗಂತ್, ಸಿಹಿ ಕಹಿ ಚಂದ್ರು, ವಿನಯ್ ರಾಜ್‌ಕುಮಾರ್, ನಟಿಯರಾದ ಪೂಜಾ ಗಾಂಧಿ, ಶ್ರುತಿ ಹರಿಹರನ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಚೈತ್ರಾ ಜೆ.ಆಚಾರ್, ನಿರ್ದೇಶಕರಾದ ಬಿ.ಸುರೇಶ್, ಪವನ್‌ಕುಮಾರ್, ಚೈತನ್ಯ ಕೆ.ಎಂ., ಗಿರಿರಾಜ್ ಬಿ.ಎಂ, ಜಯತೀರ್ಥ, ಸಾಹಿತಿಗಳಾದ ವಿಜಯ್ ಶಂಕರ್, ರಹಮತ್ ತರಿಕೇರೆ, ಬಂಜಗೆರೆ ಜಯಪ್ರಕಾಶ್, ವಿಜಯಮ್ಮ, ಕಲಾವಿದರಾದ ಚಂಪಾ ಶೆಟ್ಟಿ, ಜಯಲಕ್ಷ್ಮಿ ಪಾಟೀಲ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು, ಬರಹಗಾರರು, ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.




