ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹೆಚ್ಚಿನ ನೆರವು ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಬ್ಯಾಂಕ್ ಗಳ ಜೊತೆ ಸೇರಿ ಫಲಾನುಭವಿಗಳನ್ನೊಳಗೊಂಡಂತೆ ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸಲು ಮುಂದಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು.
ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ನೀಡುವುದೇ ಇದರ ಉದ್ದೇಶ. ಪ್ರಾಯೋಗಿಕವಾಗಿ ಸುಮಾರು 500 ಸಂಘಗಳನ್ನು ರಚಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಜೊತೆಗೆ ಮುಂದಿನ ಸಭೆಯಲ್ಲಿ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಅಂತಿಮ ರೂಪು ರೇಷೆ ಸಿದ್ಧಪಡಿಸುವಂತೆ ಸೂಚನೆ ನೀಡಿದರು.
ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸುವರ್ಣ ಮಹೋತ್ಸವ ಸಮಾರಂಭ ನಡೆಯಲಿದ್ದು, ಈ ವೇಳೆಗೆ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಚಾಲನೆ ನೀಡಲಾಗುತ್ತಿದೆ.
ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ನಬಾರ್ಡ್ ಬ್ಯಾಂಕ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು, ಆಪ್ತ ಕಾರ್ಯದರ್ಶಿ ಟಿ.ಎಚ್.ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್, ಸ್ತ್ರಿ ಶಕ್ತಿ ಯೋಜನೆಯ ಯೋಜನಾ ನಿರ್ದೇಶಕ ಎಂ.ಜಿ.ಪಾಲಿ, ನಬಾರ್ಡ್ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಡಾ.ಅಶುತೋಷ್ ಕುಮಾರ್, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರಾದ ವಿ.ಎಂ.ರುಕ್ಮಿಣಿ, ಯೋಜನಾಧಿಕಾರಿ ಸವಿತಾ ವೈ.ಡಿ ಹಾಜರಿದ್ದರು.




