ಬೆಂಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ವಿರುದ್ಧದ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಕ್ರಮ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಇದರಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಬೆಂಗಳೂರು ಹೊರವಲಯದ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.




