ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಲಘು ಶಸ್ತ್ರ ಚಿಕಿತ್ಸೆ

3 years ago

#FormerCM #BasavarajaBommai #underwent #minor #surgery

ಬೆಂಗಳೂರು: ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆರೋಗ್ಯದ ಕುರಿತ ಮಾಹಿತಿಯನ್ನು ಹಂಚಿಕೊಂಡಿರುವ ಅವರು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡಿದ್ದಾರೆ.

ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Leave a Reply