ಮಾಜಿ ಸಿಎಂ ಕುಮಾರಸ್ವಾಮಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ: ಕೆಪಿಸಿಸಿ

3 years ago

#FormerCM #Kumaraswamy #got #illegal #electricity #connection #KPCC

ಬೆಂಗಳೂರು: ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕೆಪಿಸಿಸಿ ಆರೋಪಿಸಿದೆ.

ಈ ಸಂಬಂಧ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! H D Kumaraswamy ಅವರೇ, ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ಎಂದು ಹೇಳಿದೆ.

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಪ್ರಶ್ನಿಸಿದೆ.

Leave a Reply