ಕೇರಳ ಮಾಜಿ ಸಿಎಂ ಒಮನ್ ಚಾಂಡಿ ಕಾಲವಶ

3 years ago

#Former #Kerala #CM #OomanChandy #passedaway

ಬೆಂಗಳೂರು: ಕೇರಳದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಒಮನ್ ಚಾಂಡಿ (79) ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಮುಂಜಾನೆ 4.25ಕ್ಕೆ ಕಾಲವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕ್ಯಾನ್ಸರ್ ರೋಗದಿಂದ ಬಳಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ಪುತುಪಲ್ಲಿಯಿಂದ 50 ವರ್ಷಗಳ ಕಾಲ ಶಾಸಕರಾಗಿ ಆಯ್ಕೆಯಾಗಿದ್ದ ಇವರು ಕೇರಳ ಸಿಎಂ ಆಗಿ ಕೂಡ ಸೇವೆ ಸಲ್ಲಿಸಿದ್ದರು. 1970ರಲ್ಲಿ ಯುವ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ್ದ ಇವರು, ಕೆ.ಕರುಣಾಕರನ್ ಅವರ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ 1977ರಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2004 – 2006ರವರೆಗೆ ಮತ್ತು 2011 – 2016ರವರೆಗೆ ಎರಡು ಬಾರಿ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಹಣಕಾಸು ಖಾತೆ ಸೇರಿದಂತೆ ಮಹತ್ವದ ಖಾತೆಗಳನ್ನು ನಿರ್ವಹಿಸಿದ್ದರು. ವಿಪಕ್ಷ ನಾಯಕರಾಗಿ ಕೂಡ ಸೇವೆ ಸಲ್ಲಿಸಿದ್ದರು.

Leave a Reply