ಮಾಜಿ ಶಾಸಕ ಎನ್ ರಾಜಣ್ಣ ಕಾಲವಶ

10 months ago

ಬೆಂಗಳೂರು: ಬೆಂಗಳೂರಿನ ಭಾರತೀನಗರ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿದ್ದ ಎನ್ ರಾಜಣ್ಣ ಕಾಲವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

1994ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರು ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದರು. ಸಾವಯವ ಕೃಷಿಯಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Leave a Reply