ಬೆಳಗಾವಿ: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.
ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾತಾಡಿದ ಅವರು, ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿ, ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನ ವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ ರೂ 3000 ದಂತೆ 1981-86ರಲ್ಲಿ ಆಗಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ ರೈತರು ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸಿ ಕಳೆ 20 ಹೋರಾಟ ನಡೆಸುತ್ತಿದ್ದಾರೆ ಎಂದರು.
ಸಚಿವರಾದ ರಹೀಂ ಖಾನ್, ಕೆಕೆಡಿಬಿ ಅಧ್ಯಕ್ಷ ಅಜಯ ಸಿಂಗ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.




