ಬಳ್ಳಾರಿ: ನಗರದ ಜಯನಗರದ ಶ್ರೀನಿವಾಸ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಅಜ್ಮೀರ್ ಯಾತ್ರೆಗೆ ಹೋಗಿಬರುತ್ತೇನೆ ಎಂದು ಹೇಳಿಹೋದವರು ಮರಳಿ ಬಾರದೇ ಜು.07 ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕಾಣೆಯಾದವರ ಚಹರೆ ಗುರುತು:
ಎಂ.ಎಸ್.ನಜೀರ್ ಅಹಮದ್ (50 ವರ್ಷ), ಎತ್ತರ 5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿರುತ್ತಾನೆ.
ಮುನಿಯಾರ್ ರೊಖಾಯಾ (47 ವರ್ಷ), ಅಂದಾಜು ಎತ್ತರ 5.2 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು.
ಎಂ.ಎಸ್.ಸಾನಿಯ ಕೌಸರ್ (21 ವರ್ಷ), ಎತ್ತರ 5.2 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು.
ಶಗುಪ್ತ ಅಂಜುಮ್ (15 ವರ್ಷ), ಎತ್ತರ 5.2 ಅಡಿ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು.
ಮೇಲ್ಕಂಡವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿ.ಐ ಮೊ.9480803047, ಪಿಎಸ್ಐ ಮೊ.94808203085 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು.




