ಉತ್ತಮ ಪ್ರಜೆಯಾಗಲು ಆರೋಗ್ಯ ಬಹುಮುಖ್ಯ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ: ಮಕ್ಕಳು ತಮ್ಮ ಜೀವನದಲ್ಲಿ ಉತ್ತಮ ಪ್ರಜೆಯಾಗಲು ಹಾಗೂ ಉನ್ನತ ಸ್ಥಾನಕ್ಕೆರಲು ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮಕ್ಕಳ ಕಲ್ಯಾಣ ಘಟಕ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಬಳ್ಳಾರಿ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ಕಾರಿ ಪಾಲನಾ ಸಂಸ್ಥೆಯ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಆರೋಗ್ಯ ಕಾಪಾಡುವ ಉದ್ದೇಶದಿಂದ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ತಿಂಗಳು ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಿದ್ದು, ಇದರ ಸದುಪಯೋಗ ಪಡೆಯುವುದರ ಮೂಲಕ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಜೀವನವನ್ನು ಸದೃಢವಾಗಿಟ್ಟುಕೊಳ್ಳಬೇಕು ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಮಾತಾನಾಡಿ, ಸಾಮಾನ್ಯವಾಗಿ 15-25 ವರ್ಷ ವಯಸ್ಸಿನ ಅವಧಿಯಲ್ಲಿ ಬರಬಹುದಾದ ಮಾನಸಿಕ ಖಾಯಿಲೆಯು ವ್ಯಕ್ತಿಯ ಮನಸ್ಸಿನ ಕ್ರಿಯೆಗಳಲ್ಲಿ ಆಲೋಚನೆ, ಭಾವನೆಗಳು ಹಾಗೂ ಪಂಚೇAದ್ರಿಯಗಳ ಮೂಲಕ ತನ್ನ ಸುತ್ತಲಿನ ಪರಿಸರವನ್ನು ಅರ್ಥಮಾಡಿಕೊಳ್ಳಲಾಗದ ಸ್ಥಿತಿಗೆ ಒಳಗಾಗುತ್ತಾನೆ. ಇದಕ್ಕೆ ಸೂಕ್ತ ಔಷಧೋಪಚಾರವಿದ್ದು, ಹತೋಟಿಗೆ ತರಬಹುದು ಎಂದರು.
ಈಗಾಗಲೇ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದಿಂದ ಮನೋಚೈತನ್ಯ ಕಾರ್ಯಕ್ರಮದಡಿ ಪ್ರತಿ ಎರಡನೇ ಶುಕ್ರವಾರ ಶಾಂತಿಧಾಮ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಆತ್ಮಸ್ಥೆöÊರ್ಯ ತುಂಬುವುದರ ಜೊತೆಗೆ ಚಿಕಿತ್ಸೆ ನೀಡಲಾಗುತ್ತದೆ. ನಿಲಯದಲ್ಲಿರುವ ಎಲ್ಲರೂ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಕರೆನೀಡಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞ ಡಾ.ರೋಹನ್ ವನಗುಂದಿ ಅವರು ಮಾತನಾಡಿ, ದಿನನಿತ್ಯ ಜೀವನದಲ್ಲಿ ಮಾನಸಿಕ ಒತ್ತಡವನ್ನು ನಿಭಾಯಿಸಿ, ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂದು ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈದೂರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್, ನಿರಾಶ್ರಿತರ ಕಲ್ಯಾಣ ಕೇಂದ್ರದ ಅಧೀಕ್ಷಕರಾದ ಡಾ.ಮಹೇಶ್ವರಿ, ಚಿನ್ನ ಪಾಲಯ್ಯ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕಲಾವತಿ, ಗಂಗಮ್ಮ, ಮಂಜುನಾಥ, ಜಿಲ್ಲಾ ಮಕ್ಕಳ ಕಲ್ಯಾಣ ಘಟಕದ ಸಿಬ್ಬಂದಿಗಳಾದ ಮಂಜುನಾಥ, ಈಶ್ವರ್ ರಾಯ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಶಾಂತ ಕುಮಾರ್.ಹೆಚ್., ಶರ್ಮಾಸ್ ವಲಿ, ರಂಜಿತ.ಜಿ., ಸಾಹೇರ ಬಾನು, ಪಂಚಾಕ್ಷರಯ್ಯ, ಪ್ರಹ್ಲಾದರೆಡ್ಡಿ, ರಮೇಶ್ ಬಾಬು ಹಾಗೂ ನಿಲಯದ ಮಕ್ಕಳು ಹಾಗೂ ಇತರರು ಹಾಜರಿದ್ದರು.



