ಉಚಿತ ಆರೋಗ್ಯ ತಪಾಸಣಾ ಶಿಬಿರ

4 years ago

ಬೆಂಗಳೂರು: ಶಂಕರಮಠ ವಾರ್ಡ್-75ರಲ್ಲಿ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮದ್, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕೆ.ಪಿ.ಸಿ.ಸಿ. ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಮತ್ತು ಎಮ್.ಶಿವರಾಜು ಮತ್ತು ಮಾಜಿ ಮಹಾನಗರ ಪಾಲಿಕೆ ಸದಸ್ಯ ಎಸ್.ಕೇಶವಮೂರ್ತಿ, ಬಿ.ಎಮ್.ಟಿ.ಸಿ. ಮಾಜಿ ಉಪಾಧ್ಯಕ್ಷ ವಿ.ಎಸ್.ಆರಾಧ್ಯ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇತ್ತಿಚೇಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ನಂತರ ಪೌರ ಕಾರ್ಮಿಕರಿಗೆ ಕುಕ್ಕರ್ ಗಳನ್ನು ಮತ್ತು ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಆನಾರೋಗ್ಯ ಪೀಡಿತರಿಗೆ ಹೆಚ್ಚಿನ ಚಿಕಿತ್ಸೆಗೆ ಪರಿಹಾರ ಧನವನ್ನು ವಿತರಿಸಿದರು.

ಸಲೀಮ್ ಅಹಮದ್ ಮಾತನಾಡಿ, ಕಾಂಗ್ರೆಸ್ ಪಕ್ಷ ಬಡವರ ಪರ ಮತ್ತು ಬಡವರ ಆರೋಗ್ಯದ ಬಗ್ಗೆ ಚಿಂತನೆ ಮಾಡುವ ಪಕ್ಷ. ಕೊರೊನ ಸಂಕಷ್ಟದ ಸಮಯದಲ್ಲಿ ಬಡವರು ಹಸಿವಿನಿಂದ ಮತ್ತು ಅನಾರೋಗ್ಯದಿಂದ ಬಳಲಬಾರದು ಎಂದು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಕೊರೊನ ವಾರಿಯರ್ಸ್ ನಂತೆ ಕೆಲಸ ಮಾಡಿದರು. ಆಹಾರ ಪ್ಯಾಕೇಟ್, ದಿನಸಿ ಕಿಟ್ ಮತ್ತು ಔಷಧಿ ವಿತರಣೆ ಮತ್ತು ಕೊರೊನ ಪೀಡಿತರಿಗೆ ಆಸ್ಪತ್ರೆಗೆ ಸೇರಿಸುವ ಪುಣ್ಯದ ಕಾರ್ಯ ಮಾಡಿದರು. ಬಡವರ ಆರೋಗ್ಯದ ಬಗ್ಗೆ ಸದಾ ಕಾಳಜಿ ಇರುವುದರಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿದೆ ಎಂದರು.

ಬಿ.ಕೆ.ಹರಿಪ್ರಸಾದ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಬಡವರ ಆರೋಗ್ಯದ ಬಗ್ಗೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಯಿತು ಮತ್ತು ಕಾಂಗ್ರೆಸ್ ಆಡಳಿತದಲ್ಲಿ ಬಡವರಿಗೆ ಉತ್ತಮ ಚಿಕಿತ್ಸೆ ಲಭಿಸಬೇಕು ಎಂಬ ಕಾರಣದಿಂದ ಉತ್ತಮವಾದ ಹೈಟೆಕ್ ಆಸ್ಪತ್ರೆಗಳ ನಿರ್ಮಾಣ ಮಾಡಲಾಯಿತು ಎಂದರು.

ಎಮ್.ಶಿವರಾಜು ಮಾತನಾಡಿ, ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಬಡವರು ಮತ್ತು ಮಧ್ಯಮ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವುದಿಲ್ಲ, ಬಡವರಿಗೆ ಉತ್ತಮ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಸಿಗಬೇಕು ಎಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದರು.

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸ್ತ್ರೀ ರೋಗ ತಜ್ಞರು, ಕಣ್ಣಿನ ತಜ್ಞರು, ರಕ್ತದೊತ್ತಡ ಸಕ್ಕರೆ ಖಾಯಿಲೆಗೆ ಪರೀಕ್ಷೆ, ಮೂಳೆ ತಜ್ಞರು, ಹೃದಯ ರೋಗ ತಜ್ಞರು, ಮಕ್ಕಳ ತಜ್ಞರು, ಮಾನಸಿಕ ಮತ್ತು ಕ್ಷಯರೋಗ ತಪಾಸಣೆ, ಹಲ್ಲಿನ ತಪಾಸಣೆ ನಡೆಸಿದರು.

Leave a Reply