ಬಳ್ಳಾರಿ: ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಮನೆಗಳಲ್ಲಿ ಅಣಬೆ ಬೇಸಾಯ ಮಾಡಬಹುದು. ಇದರಿಂದ ತಮ್ಮ ಕುಟುಂಬ ನಿರ್ವಹಣೆಗೆ ಆರ್ಥಿಕ ವೃದ್ಧಿಯಾಗುವುದು ಎಂದು ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಹೇಳಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ರಚಿಸಿರುವ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮಹಿಳೆಯರಿಗೆ ಆಯೋಜಿಸಿದ್ದ 10 ದಿನಗಳ ಉಚಿತ ಅಣಬೆ ಬೇಸಾಯ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಗ್ರಾಮ ಪಂಚಾಯತ್ ಒಕ್ಕೂಟಗಳಿಂದ ನಿರ್ವಹಿಸುತ್ತಿರುವ ಘನ ತ್ಯಾಜ ನಿರ್ವಹಣಾ ಘಟಕಗಳ ವಾಹನ ಚಾಲನಾ ತರಬೇತಿ ಪಡೆದ ಸ್ವ- ಸಹಾಯ ಗುಂಪಿನ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಯೋಜನಾ ನಿರ್ದೇಶಕ ವಿನೋದ್, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೆಸಾಬ್ ಎಚ್.ಎರಿಮನಿ, ಜಿಪಂನ ಸಂಪನ್ಮೂಲ ವ್ಯಕ್ತಿ ರಾಮಚಂದ್ರ ರಾಜಾಪೂರ, ಎನ್‌ಆರ್‌ಎಲ್‌ಎಂ ನ ಸಿಬ್ಬಂದಿಗಳಾದ ರಾಜೇಂದ್ರ, ವಿಜಯ ಕುಮಾರ, ರಘುವರ್ಮ, ಉಪನ್ಯಾಸಕರಾದ ಜಡೇಪ್ಪ, ದಿನೇಶ, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ ಸಿರುಗುಪ್ಪ ತಾಲ್ಲೂಕಿನ 55 ಜನ ಶಿಬಿರಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ತರಬೇತಿ ಪಡೆದರು.




