ಲಖ್ನೋ: ಉತ್ತರ ಪ್ರದೇಶದದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ, 12ನೇ ತರಗತಿ ಉತ್ತೀರ್ಣರಾದ ಬಾಲಕಿಯರಿಗೆ ಉಚಿತ ಸ್ಮಾರ್ಟ್ ಫೋನ್ ಹಾಗೂ ಪದವೀಧರ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ ಕೊಡುವ ಭರವಸೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.
कल मैं कुछ छात्राओं से मिली। उन्होंने बताया कि उन्हें पढ़ने व सुरक्षा के लिए स्मार्टफोन की जरूरत है।
मुझे खुशी है कि घोषणा समिति की सहमति से आज UP कांग्रेस ने निर्णय लिया है कि सरकार बनने पर इंटर पास लड़कियों को स्मार्टफोन और स्नातक लड़कियों को इलेक्ट्रानिक स्कूटी दी जाएगी। pic.twitter.com/hoW5DfhS3f
— Priyanka Gandhi Vadra (@priyankagandhi) October 21, 2021
ನಾನು ಕೆಲ ವಿದ್ಯಾರ್ಥಿನಿಯರನ್ನು ಬುಧವಾರ ಭೇಟಿಮಾಡಿದೆ. ಅವರು ತಮ್ಮ ಅಧ್ಯಯನಕ್ಕೆ ಮತ್ತು ಭದ್ರತೆ ದೃಷ್ಟಿಯಿಂದ ಸ್ಮಾರ್ಟ್ ಫೋನ್ ಬೇಕು ಎಂದರು. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಕಾಂಗ್ರೆಸ್ ಘಟಕ, ಚುನಾವಣಾ ಪ್ರಣಾಳಿಕೆ ಸಮಿತಿಯ ಒಪ್ಪಿಗೆ ಮೇರೆಗೆ ಪಕ್ಷ ಅಧಿಕಾರಕ್ಕೆ ಬಂದಲ್ಲಿ, 12ನೇ ತರಗತಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರಿಗೆ ಉಚಿತ ಸ್ಮಾರ್ಟ್ ಫೋನ್ ಮತ್ತು ಪದವೀಧರ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ ನೀಡಲು ನಿರ್ಧರಿಸಿದ್ದೇನೆ. ಇದು ನನಗೆ ತುಂಬಾ ಸಂತಸ ತಂದಿದೆ ಎಂದು ಅವರು ಟ್ವೀಟ್ ನಲ್ಲಿ ಘೋಷಿಸಿದ್ದಾರೆ.




