ಉಚಿತವಾಗಿ ಚಿಕಿತ್ಸೆ ಸಿಗಬೇಕು ಎಂಬುದು ಸರ್ಕಾರದ ಕಾಳಜಿ: ಸಿದ್ದರಾಮಯ್ಯ

2 years ago

ಮೈಸೂರು: ದುಡಿಯುವ ವರ್ಗಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 ಕೋಟಿ ಕೂಡ ಕೊಟ್ಟಿದ್ದೇವೆ. ಇನ್ನೂ 50 ಕೋಟಿ ಕೊಡ್ತೀವಿ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ನ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ ಎಂದರು.

ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ ಅಗತ್ಯ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು, ಇದಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.

ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ. ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ ಎಂದರು.

Leave a Reply