ಬೆಂಗಳೂರು: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿರಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸೂಚನೆ ನೀಡಿದೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಸರಕು ವಾಹನ ತಪಾಸಣೆ ವೇಳೆ ಮಾಲೀಕರು ಅಥವಾ ಸರುಕು ಸಾಗಣೆದಾರರು ಜಿಎಸ್’ಟಿಐಎನ್ ಬಿಲ್ ಮತ್ತು ಇತರೆ ದಾಖಲೆಗಳನ್ನು ಇಟ್ಚುಕೊಂಡಿರುವುದು ಅತ್ಯಗತ್ಯ. ಇದಲ್ಲದೆ ವಸ್ತುವನ್ನು ಖರೀದಿಸಿದ ಸ್ಥಳ, ಉದ್ದೇಶ ಹಾಗೂ ಸಾಗಿಸುವ ಸ್ಥಳದ ಧೃಡೀಕರಣ ಸೇರಿದಂತೆ ಇತರೆ ದಾಖಲೆಗಳನ್ನು ಇಟ್ಟುಕೊಂಡಿರಬೇಕು ಎಂದು ಸೂಚನೆ ನೀಡಲಾಗಿದೆ.
ವಾಣಿಜ್ಯ ಬಳಕೆಗೆ, ಇ-ವೇ ಬಿಲ್ ಕಡ್ಡಾಯವಾಗಿದೆ. ಇದು ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಲಾಗುವ ಎಲೆಕ್ಟ್ರಾನಿಕ್ ಬಿಲ್ ಆಗಿದೆ. ಕೃಷಿ ಉತ್ಪನ್ನಗಳಿಗೆ, ಯಾವುದೇ ಇ-ವೇ ಬಿಲ್ ಅಗತ್ಯವಿಲ್ಲ. ಆದರೆ ಹಣಕಾಸಿನ ವಹಿವಾಟಿನ ವಿವರಗಳನ್ನು ಪ್ರಮಾಣೀಕರಿಸುವ ಇತರ ಕಾನೂನು ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಅಂಗಡಿ ಅಥವಾ ಕಾರ್ಖಾನೆ ಇದ್ದರೆ, ಡೀಲರ್ ಗಳ ವಿವರಗಳು, ತಯಾರಕರ ವಿವರ, ಗುಣಮಟ್ಟ ಮತ್ತು ವಾಹನದ ವಿವರಗಳು, ಜಿಎಸ್’ಟಿ ಬಿಲ್ ಗಳ ಅಗತ್ಯವಿದೆ.
ಇಂತಹ ಅಗತ್ಯ ದಾಖಲೆಗಳೊಂದಿಗೆ ಸರಕು ಸಾಗಾಣಿಕೆಗೆ ಯಾವುದೇ ರೀತಿಯ ಅಡ್ಡಿ ಇರುವುದಿಲ್ಲ. ಇಲ್ಲವಾದರೆ ಆಯೋಗದ ನಿಯಮ ಪಾಲಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.




