ನದಿ ಹಂಚಿಕೆ ವಿವಾದ ಪರಿಹಾರ ನಿಟ್ಟಿನಲ್ಲಿ ಸರ್ಕಾರಕ್ಕೆ ಸಂಪೂರ್ಣ ಸಹಕಾರ

3 years ago

#Full #cooperation #government #resolving #river #sharing #dispute #Congress #bjp #jds

ಬೆಂಗಳೂರು: ಮಹಾದಾಯಿ, ಕೃಷ್ಣಾ, ಮೇಕೆದಾಟು, ಕಾವೇರಿ ನದಿ ನೀರು ಹಂಚಿಕೆ ಹಾಗೂ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಇರುವ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿಗಳ ಮಧ್ಯ ಪ್ರವೇಶಕ್ಕೆ ಒತ್ತಾಯಿಸಲು ಕರ್ನಾಟಕ ಸರ್ವ ಪಕ್ಷಗಳ ಸಭೆ ತೀರ್ಮಾನಿಸಿದೆ.

ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯಿಲಿ, ಜಗದೀಶ್ ಶೆಟ್ಟರ, ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ.ಎಲ್.ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಜಿ.ಸಿ. ಚಂದ್ರಶೇಖರ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ರೈತರ ಹಿತ ರಕ್ಷಣೆಗೆ ಸರ್ಕಾರದೊಂದಿಗೆ ಇರುವುದಾಗಿ ಬೆಂಬಲ ವ್ಯಕ್ತಪಡಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಕುಶಲೋಪರಿ: ವಿಧಾನಸಭೆ ಚುನಾವಣೆ ಬಳಿಕ ರಾಜಕೀಯವಾಗಿ ಕೆಸರೆರಚಾಟದಲ್ಲಿ ತೊಡಗಿದ್ದ ಜೆಡಿಎಸ್, ಕಾಂಗ್ರೆಸ್, ಬಿಜೆಪಿಯ ನಾಯಕರುಗಳು ಇಂದು ಸರ್ವಪಕ್ಷ ಸಭೆಯಲ್ಲಿ ಪರಸ್ಪರ ಆತ್ಮೀಯತೆ ಹಾಗೂ ಸೌಹಾರ್ದತೆಯಿಂದ ಕೈ ಕುಲುಕಿ ಉಭಯ ಕುಶಲೋಪರಿ ವಿನಿಮಯ ಮಾಡಿಕೊಂಡಿದ್ದು ಗಮನ ಸೆಳೆಯಿತು.

ಸರ್ವಪಕ್ಷಗಳ ಸಭೆಗೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಡಿ.ಕೆ.ಶಿವಕುಮಾರ್ ಎದ್ದು ನಿಂತು ಸ್ವಾಗತಿಸಿದರು. ಮಧ್ಯದಲ್ಲಿದ್ದ ಯಡಿಯೂರಪ್ಪನವರು ಕುಮಾರಸ್ವಾಮಿ ಅವರ ಭುಜ ತಟ್ಟಿ ಆಹ್ವಾನಿಸಿದರು. ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ಗೌರವಪೂರ್ವಕವಾಗಿ ಆಸನ ತೋರಿಸಿದರು. ಈ ಹಂತದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಲಾಘವಕ್ಕೆ ಕೈಚಾಚಿದರಾದರೂ ಕುಮಾರಸ್ವಾಮಿಯವರು ಆಚೆಬದಿ ಕುಳಿತಿದ್ದ ಸಿದ್ದರಾಮಯ್ಯ ಅವರತ್ತ ಬಾಗಿ ಮೊದಲು ಕೈ ಕುಲುಕಿದರು. ನಂತರ ಡಿ.ಕೆ.ಶಿವಕುಮಾರ್ ಅವರಿಗೆ ಹಸ್ತ ಲಾಘವ ಮಾಡಿದರು.

Leave a Reply