ದಾವಣಗೆರೆ: ರಾಜ್ಯ ಕಾಂಗ್ರೆಸ್ಸಿನಲ್ಲಿ ಅಧಿಕಾರಕ್ಕಾಗಿ ದೊಡ್ಡ ಮಟ್ಟದ ಕಚ್ಚಾಟ ನಡೆದಿದೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಮದ್ದು ಅರೆಯಬೇಕು. ಬೆಳಗಾವಿಯ ವಿಧಾನಸಭೆ ಅಧಿವೇಶನದ ವೇಳೆಗೆ ಪೂರ್ಣ ಪ್ರಮಾಣದ ಮುಖ್ಯಮಂತ್ರಿ ನೇಮಕವಾಗಿರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹಂಗಾಮಿ ಮುಖ್ಯಮಂತ್ರಿಗಳು ಬರಬಾರದು. ಪೂರ್ಣ ಪ್ರಮಾಣದ ಮುಖ್ಯಮಂತ್ರಿ ನೇಮಕಗೊಂಡಿರಬೇಕು ಎಂದರು.
ರಾಜ್ಯದ ಮುಖ್ಯಮಂತ್ರಿ ಕುರ್ಚಿಗಾಗಿ ಕಾಳಗ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಔಟ್ ಗೋಯಿಂಗ್ ಮುಖ್ಯಮಂತ್ರಿ ಎಂದು ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ನಿಮ್ಮ ಬಡಿದಾಟಕ್ಕೆ ರೈತರು ಕಂಗಾಲಾಗಿದ್ದಾರೆ. ರೈತರು ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು ಎಂದು ಅಪೇಕ್ಷಿಸುತ್ತಿದ್ದಾರೆ. ಕುರ್ಚಿ ಕಾಳಗ ಮುಗಿಸಿಕೊಂಡು, ಪರಿಹಾರ ಕಂಡುಕೊಂಡು ಬೆಳಗಾವಿ ಅಧಿವೇಶನಕ್ಕೆ ಬಂದರೆ ಆಗ ರೈತರ ಸಮಸ್ಯೆಗೆ ಸ್ಪಂದನೆ ಮಾಡಲು ಸಾಧ್ಯವಾಗುತ್ತದೆ. ಉತ್ತರ ಕರ್ನಾಟಕದ ಸಮಸ್ಯೆಗೆ ಪರಿಹಾರ ಸಾಧ್ಯ ವಾಗುತ್ತದೆ ಎಂದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಅನೇಕ ಜ್ವಲಂತ, ಉತ್ತರ ಕರ್ನಾಟಕದ ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬುದಾಗಿ ಜನರು ಕಾಯುತ್ತಿದ್ದಾರೆ. ಹಾಗಾಗಿ ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡಿಯೇ ಅಧಿವೇಶನ ನಡೆಸಬೇಕಾಗುತ್ತದೆ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ಕುರ್ಚಿ ಕಾಳಗ ಪರಿಹರಿಸಿಕೊಂಡೇ ಬೆಳಗಾವಿ ಅಧಿವೇಶನಕ್ಕೆ ಬರಬೇಕು. ತರಾತುರಿಯಲ್ಲಿ ಅಧಿವೇಶನ ನಡೆಸುವುದು, ಅಲ್ಲಿಯೂ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಮುಂದುವರಿಸಿದಲ್ಲಿ ರೈತರ ಸಮಸ್ಯೆ ಗಳಿಗೆ ಸ್ಪಂದನೆ ಮಾಡಲು ಸಾಧ್ಯವಿಲ್ಲ. ಉತ್ತರ ಕೊಡಲು ಸಾಧ್ಯವಿಲ್ಲ. ಎಲ್ಲವನ್ನೂ ಇತ್ಯರ್ಥ ಮಾಡಿಕೊಂಡೇ ಬೆಳಗಾವಿ ಅಧಿವೇಶನಕ್ಕೆ ಸರ್ಕಾರ ಬರಬೇಕು ಎಂಬುದು ಬಿಜೆಪಿಯ ಆಗ್ರಹವಾಗಿದೆ ಎಂದರು.
ಅಧಿವೇಶನ ಮುಂದೂಡಿದರೂ ಪರವಾಗಿಲ್ಲ. ರೈತರ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಉತ್ತರ ಮತ್ತು ಪರಿಹಾರ ಸರ್ಕಾರ ಕೊಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.




