ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮೊದಲ ಅವಧಿಯ ಸರ್ಕಾರದ ವೇಳೆ ನಡೆದಿದ್ದ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ತನಿಖೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಕೇಶವ ನಾರಾಯಣ ನೇತೃತ್ವದ ಆಯೋಗದ ವರದಿಯನ್ನು ಭಾಗಶಃ ಒಪ್ಪಿಕೊಂಡು, ಶಿಫಾರಸುಗಳನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಸಂಪುಟ ಸಭೆಯಲ್ಲಿ ಈ ವರದಿಯ ಕುರಿತಂತೆ ಸುದೀರ್ಘ ಚರ್ಚೆ ನಡೆಸಲಾಯಿತು. ಈಗಾಗಲೇ ಸುಪ್ರೀಂಕೋರ್ಟ್ ಪ್ರಕರಣದ ಬಗ್ಗೆ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಆಯೋಗದ ವರದಿ ತಿರಸ್ಕರಿಸಲು ತೀರ್ಮಾನಿಸಲಾಯಿತು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಅಂದಿನ ಗೃಹಸಚಿವ ಕೆ.ಜೆ.ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಎ.ಎಮ್ ಪ್ರಸಾದ್ ಪ್ರಣವ ಮೊಹಾಂತಿ ಐ.ಪಿ.ಎಸ್ ಇವರುಗಳ ವಿರುದ್ಧ ಕೇಳಿ ಬಂದ ಆರೋಪದ ಬಗ್ಗೆ ನಡೆದ ತನಿಖೆಯಲ್ಲಿ ನ್ಯೂನ್ಯತೆಗಳಿವೆ ಎಂದು ನ್ಯಾಯಮೂರ್ತಿ ವರದಿಯಲ್ಲಿ ತಿಳಿಸಿದ್ದಾರೆ.
ಆದರೆ ಆತ್ಮಹತ್ಯೆಗೂ ಮುನ್ನ ಗಣಪತಿ ಅವರು ಸಂದರ್ಶನದಲ್ಲಿ ತಮ್ಮ ಆತ್ಮಹತ್ಯೆಗೆ ಇವರುಗಳು ಕಾರಣ ಎಂದು ಹೇಳಿದ್ದರು. ಆದರೆ ಇದು ಸಂಪೂರ್ಣ ಸುಳ್ಳು ಎಂದು ಕೇಶವನಾರಾಯಣ ಆಯೋಗ ಸ್ಪಷ್ಟವಾಗಿ ಹೇಳಿದ್ದು, ತನಿಖಾ ಪ್ರಕರಣದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬಂದಿರುವುದರಿಂದ ಕೆಲವು ಅಧಿಕಾರಿ/ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶಿಫಾರಸು ಮಾಡಿತ್ತು. ಆದರೆ, ಈ ಶಿಫಾರಸ್ಸನ್ನು ರಾಜ್ಯ ಸಚಿವ ಸಂಪುಟ ತಿರಸ್ಕರಿಸಿದೆ.
ಕೇಶವ ನಾರಾಯಣ ಆಯೋಗದ ವರದಿ ಬಗ್ಗೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಪೊಲೀಸ್ ಅಧಿಕಾರಿ ಎಂ ಕೆ ಶ್ರೀವಾಸ್ತವ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ಅಧ್ಯಯನ ವರದಿಯಲ್ಲಿ ತನಿಖಾ ಕ್ರಮಗಳ ಬಗ್ಗೆ ವಿಚಾರಣಾ ಆಯೋಗ ಮಾಡಿರುವ ಆಕ್ಷೇಪಣೆಗಳನ್ನು ಸಿ.ಬಿ.ಐ ಸಲ್ಲಿಸಿರುವ ವರದಿಯನ್ನು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯವು ಮಾನ್ಯ ಮಾಡಿರುವುದರಿಂದ ಮತ್ತು ಮಾನ್ಯ ಸರ್ವೋಚ್ಛ ನ್ಯಾಯಾಲಯ ಎಸ್.ಎಲ್.ಪಿ ಯಲ್ಲಿ ಸಿ.ಬಿ.ಐ ಪ್ರಕರಣವನ್ನು ಮುಕ್ತಾಯ ಮಾಡಿರುವುದನ್ನು ಎತ್ತಿ ಹಿಡಿದಿರುವುದರಿಂದ, ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯ ಶಿಫಾರಸ್ಸನ್ನು ಒಪ್ಪುವ ಅಗತ್ಯವಿಲ್ಲವೆಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನ್ಯಾಯಮೂರ್ತಿ ಕೇಶವ ನಾರಾಯಣ ಆಯೋಗದ ವರದಿಯನ್ನು ಭಾಗಶಃ ಒಪ್ಪಿಕೊಂಡಿದೆ. ಹಾಗೆಯೇ ಕೆಲವು ಶಿಫಾರಸುಗಳನ್ನು ತಿರಸ್ಕರಿಸಿದೆ ಎಂದರು.



