ಬೆಂಗಳೂರು: ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ “ಗಾಂಧಿ ಭಾರತ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ನಾವು – ನೀವು ಎಲ್ಲರೂ ಒಗ್ಗೂಡಿ ಸೋಲಿಸೋಣ ಎಂದು ಕರೆ ನೀಡಿದರು.
ಮಹಾತ್ಮಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕವಾದದ್ದು. ಗಾಂಧಿ ಜಗತ್ತು ಕಂಡ ಅಪರೂಪದ ಸಂತ. ಇವರು ಭಾರತೀಯರ ಹೆಮ್ಮೆ ಎಂದರು.
ಸತ್ಯ, ಶಾಂತಿ, ಅಹಿಂಸೆಗಳು ಭಾರತದ ಆತ್ಮವಿದ್ದಂತೆ. ಇಲ್ಲಿ ಗೋಡ್ಸೆಗಳು ಬೆಳೆಯಲು ಬಿಡಬಾರದು. ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರ ಮಾಡಲು ಅವಕಾಶ ಕೊಡಬಾರದು. ಕೋಮು ಶಕ್ತಿಗಳನ್ನು ಸೋಲಿಸಲೇಬೇಕು ಎಂದು ಕರೆ ನೀಡಿದರು.
ಕೋಮು ದುಷ್ಟಶಕ್ತಿಗಳು ರಾಜ್ಯದ, ದೇಶದ ಅಭಿವೃದ್ಧಿಗೆ ಮಾರಕ. ಬಿಜೆಪಿ ಅಧಿಕಾರದಲ್ಲಿ ಇದ್ದಾಗೆಲ್ಲಾ ಸಮಾಜವನ್ನು, ಜಾತಿ, ಧರ್ಮದ ಹೆಸರಲ್ಲಿ ವಿಭಜಿಸುತ್ತಿದ್ದಾರೆಯೇ ಹೊರತು ಜನಪರವಾದ, ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ರೂಪಿಸಲೇ ಇಲ್ಲ, ಜಾರಿ ಮಾಡಲೂ ಇಲ್ಲ. ಬಿಜೆಪಿಗೆ ಜನಪರ ಪ್ರಗತಿ ಮುಖ್ಯ ಅಲ್ಲವೇ ಅಲ್ಲ ಎಂದರು.
ನಾವು ಸರ್ವ ಜಾತಿ, ಜನಾಂಗ, ಧರ್ಮದವರಿಗೆ ಮತ್ತು ಸರ್ವ ವರ್ಗದವರ ಏಳೆಗೆಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಿದರೆ, ಬಿಜೆಪಿಯವರು ಈ ಜನಪರ ಕಾರ್ಯಕ್ರಮಗಳ ವಿರುದ್ಧ ತಪ್ಪು ಮಾಹಿತಿ ನೀಡಿ ಫಲಾನುಭವಿಗಳನ್ನು ಅವಮಾನಿಸಿದರು ಎಂದರು.
ಗಾಂಧಿ ಅವರು ಬೆಳಗಾವಿ ಅಧಿವೇಶನದಲ್ಲಿ ಹಿಂದು-ಮುಸ್ಲಿಂ ಐಕ್ಯತೆ, ಗ್ರಾಮ ಸ್ವರಾಜ್ಯ, ಸರ್ವೋದಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಸಂದೇಶ ನೀಡಿದ್ದಾರೆ. ಇದು ಕಾಂಗ್ರೆಸ್ ನ ಸಿದ್ಧಾಂತ ಮತ್ತು ಕಾರ್ಯಕ್ರಮಗಳಾಗಿವೆ ಎಂದರು.
ಗಾಂಧಿ ಭಾರತದ ಆತ್ಮ, ಗಾಂಧಿ ಭಾರತದ ಪ್ರಜ್ಞೆ, ಗಾಂಧಿ ಭಾರತದ ಆಲೋಚನಾ ಕ್ರಮ. ಆದ್ದರಿಂದ ಗಾಂಧಿಯ ದೇಹವನ್ನು ಕೊಲ್ಲಬಹುದೇ ಹೊರತು, ಗಾಂಧಿತತ್ವಗಳು, ವಿಚಾರಗಳನ್ನು ಕೊಲ್ಲಲು ಸಾಧ್ಯವೇ ಇಲ್ಲ. ಗಾಂಧಿ ವಿಚಾರಗಳು ಈ ಮಣ್ಣಿನಲ್ಲಿ ಬೆರೆತಿವೆ ಎಂದರು.
ಗಾಂಧಿಯವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನದ ಶತಾಬ್ದಿ ಅರ್ಥಪೂರ್ಣವಾಗಿ ಇಡೀ ವರ್ಷ ನಡೆಯುತ್ತಿದೆ. ಇದರಲ್ಲಿ ಇಡೀ ರಾಜ್ಯದ ಎಲ್ಲಾ ವಯೋಮಾನದವರು ಭಾಗಿ ಆಗಿ ಅರ್ಥಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.
ನರೇಗಾ ಮತ್ತು ಅನ್ನಭಾಗ್ಯ ಕಾರ್ಯಕ್ರಮಗಳು ಕೋವಿಡ್ ಸಂದರ್ಭದಲ್ಲಿ ಕೋಟ್ಯಂತರ ಜನರನ್ನು ಹಸಿವಿನಿಂದ ರಕ್ಷಿಸಿ ಜೀವ ಉಳಿಸಿತು. ಹೀಗಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೆ ತಂದ ನರೇಗಾ ಮತ್ತು ಆಹಾರ ಭದ್ರತೆ ಕಾಯ್ದೆಯನ್ನು ನಾವು ಸ್ಮರಿಸಬೇಕು ಎಂದರು.
ಬಿಜೆಪಿ ರಾಜ್ಯದಲ್ಲಿ, ದೇಶದಲ್ಲಿ ಕಾನೂನು v/s ಕಾನ್ಸ್ಪಿರೆಸಿ ನಡೆಸುತ್ತಿದೆ. ಕಾನ್ಸ್ಪಿರೆಸಿ ಮೂಲಕ ಕಾನೂನನ್ನು ಸೋಲಿಸಲು ಯತ್ನಿಸಿ ರಾಜಕೀಯ ಅಸ್ಥಿರತೆ ಸೃಷ್ಟಿಸುತ್ತಿದೆ. ಮಹಾತ್ಮ ಗಾಂಧಿ ಅವರು ಹೇಳಿದಂತೆ, “ಎಲ್ಲಾ ನ್ಯಾಯಾಲಯಗಳಿಗಿಂತ ಆತ್ಮಸಾಕ್ಷಿಯ ನ್ಯಾಯಾಲಯ ದೊಡ್ಡದು” . ಈ ಆತ್ಮಸಾಕ್ಷಿಗೆ ತಕ್ಕಂತೆ ನಡೆಯೋಣ ಎಂದು ಕರೆ ನೀಡಿದರು.




