ಬೆಂಗಳೂರು: ಗ್ರಾಮೀಣ ಆರ್ಥಿಕತೆಗೆ ಬಲ ತುಂಬಿ, ಆ ಮೂಲಕ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿತ್ತು. ಈ ಚಿಂತನೆಯ ಮೇಲೆ ಜೀವ ತಳೆದದ್ದೇ ಮನರೇಗಾ ಯೋಜನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಬಡಜನರಿಗೆ ಕೆಲಸವನ್ನು ಸಂವಿಧಾನಾತ್ಮಕ ಹಕ್ಕನ್ನಾಗಿಸಿ, ವರ್ಷದ ಯಾವುದೇ ದಿನಗಳಲ್ಲಿ, ಅವರು ವಾಸಿಸುವ ಸ್ಥಳದಲ್ಲೇ ಉದ್ಯೋಗ ಒದಗಿಸುವುದು ಮನರೇಗಾ ಯೋಜನೆಯ ಮೂಲ ಆಶಯ. ಪ್ರಧಾನಿ Narendra Modi ಅವರ ಬಿಜೆಪಿ ಸರ್ಕಾರ ಕೇವಲ ಮಹಾತ್ಮ ಗಾಂಧಿಯವರ ಹೆಸರಿನ ಯೋಜನೆ ರದ್ದು ಮಾಡಿರುವುದಲ್ಲ, ಬದಲಿಗೆ ಗ್ರಾಮೀಣ ಆರ್ಥಿಕತೆಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಂದು ನಾಥೂರಾಮ ಗೋಡ್ಸೆಯ ಗುಂಡೇಟಿಗೆ ಮಹಾತ್ಮ ಗಾಂಧಿ ಬಲಿಯಾದ ಬಳಿಕ ಹೇಗೆ ಮನೆ ಮನೆಗೆ ಗಾಂಧಿ ವಿಚಾರಧಾರೆಗಳು ಹೆಚ್ಚೆಚ್ಚು ತಲುಪಿತೋ, ಇನ್ನು ಮುಂದೆ ಹಾಗೆಯೇ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಗಾಂಧೀಜಿಯವರ ಹೆಸರು ರಾರಾಜಿಸಲಿದೆ. ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದಿದ್ದಾರೆ.

ಅಳಿಸಿ ಹಾಕಲು ಗಾಂಧಿ ಎಂಬುದು ಬರಿ ಹೆಸರಲ್ಲ, ಅನ್ಯಾಯ – ಅಸತ್ಯಗಳ ವಿರುದ್ಧದ ಹೋರಾಟಕ್ಕೆ ಕೋಟ್ಯಂತರ ಭಾರತೀಯರಿಗೆ ಇಂದಿಗೂ ಪ್ರೇರಕ ಶಕ್ತಿಯಾಗಿದೆ.. ಮುಂದೆಯೂ ಗಾಂಧಿಯೇ ಈ ದೇಶದ ಆದರ್ಶ ಮತ್ತು ಅಸ್ಮಿತೆ ಎಂದಿದ್ದಾರೆ.




