ಸಾಮಾಜಿಕ ಸಾಮರಸ್ಯ ಕಾಪಾಡುವಲ್ಲಿ ಅವರ ತತ್ವ ಜೀವಂತವಾಗಿಡುವ ಅವಶ್ಯಕ: ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ: ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಕಾರ್ಯಕ್ರಮವನ್ನು ರಾಮನಗರದಲ್ಲಿನ ಗಾಂಧಿ ಭವನದಲ್ಲಿ ಆಯೋಜನೆ ಮಾಡುವ ಮೂಲಕ ಸರ್ವಧರ್ಮ ಪ್ರಾರ್ಥನೆ, ವಿದ್ಯಾರ್ಥಿಗಳಿಂದ ಗಾಂಧಿ ಚಿಂತನೆಗಳ ಕುರಿತು ಭಾಷಣವನ್ನು ಏರ್ಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ಏರ್ಪಡಿಸಲಾದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಾಂಧೀಜಿಯವರ ಚಿಂತನೆ ಹಾಗೂ ತತ್ವಗಳು ಇಂದಿಗೂ ಜಾಗತಿಕವಾಗಿ ಪ್ರಸ್ತುತವಾಗಿದ್ದು ಅವರ ಚಿಂತನೆಗಳನ್ನು ಜೀವಂತವಾಗಿಡುವ ಕೆಲಸ ಮಾಡುವ ಮೂಲಕ ಯುವ ಜನಾಂಗದಲ್ಲಿ ಸತ್ಯ, ಅಹಿಂಸೆ, ಶಾಂತಿ, ಸರಳತೆಯ ಭಾವನೆಗಳನ್ನು ಬಿತ್ತಬೇಕಾಗಿದೆ. ಈ ನಿಟ್ಟಿನಲ್ಲಿ ರಾಮನಗರದಲ್ಲಿನ ಗಾಂಧಿ ಭವನದಲ್ಲಿ ವಿದ್ಯಾರ್ಥಿಗಳಿಗೆ ನಿರಂತರ ಚಟುವಟಿಕೆಗಳನ್ನು ನಡೆಸುವ ಮೂಲಕ ಗಾಂಧೀಜಿಯವರ ತತ್ವ, ಚಿಂತನೆಗಳ ಕುರಿತು ಮನವರಿಕೆ ಮಾಡುವ ಕೆಲಸವನ್ನು ಮಾಡಲು ವಿವಿಧ ಇಲಾಖೆಗಳಿಂದ ಕ್ರಮವಹಿಸಲು ಆದೇಶ ನೀಡಲಾಗುತ್ತದೆ ಎಂದರು.
ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಅಂಗವಾಗಿ ಗಾಂಧಿ ಭವನದಲ್ಲಿ ಅಕ್ಟೋಬರ್ 2 ರಂದು 10 ಗಂಟೆಗೆ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ. ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿ ಕುರಿತು ವಿದ್ಯಾರ್ಥಿಗಳಿಂದ ಉಪನ್ಯಾಸ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿರುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಾಗುತ್ತದೆ.
ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಾಲಿಕೆ ಮೇಯರ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತದೆ. ಎಲ್ಲಾ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಚನೆ ನೀಡಿದರು.
ತಾಲ್ಲೂಕು ಕೇಂದ್ರ ಹಾಗೂ ಶಾಲಾ, ಕಾಲೇಜುಗಳಲ್ಲಿ ಜಯಂತಿ ಆಚರಣೆಗೆ ಸೂಚನೆ; ಎಲ್ಲಾ ತಾಲ್ಲೂಕುಗಳಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಬೇಕು ಮತ್ತು ಶಾಲಾ, ಕಾಲೇಜುಗಳಲ್ಲಿಯು ಜಯಂತಿ ಆಚರಣೆ ಮಾಡಬೇಕು, ಜಯಂತಿ ಅಂಗವಾಗಿ ಶ್ರಮಾದಾನ, ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳಲು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಅಭಿಷೇಕ್, ಸಂತೋಷ್ ಪಾಟೀಲ್, ಪಾಲಿಕೆ ಆಯುಕ್ತರಾದ ರೇಣುಕಾ, ಯೋಜನಾ ನಿರ್ದೇಶಕ ಡಾ; ಮಹಂತೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.




