ಬೆಂಗಳೂರು: ಇತ್ತೀಚೆಗೆ ಕೆಲವು ಕಡೆ ದೇವಾಲಯಗಳಲ್ಲಿ ನೀಡಿದ ಪ್ರಸಾದ ಸೇವಿಸಿ ಕೆಲವರು ಅಸ್ವಸ್ಥರಾದ ಘಟನೆ ನಡೆದಿರುವ ಬೆನ್ನಲ್ಲೇ ಇದೀಗ ಈ ವಾರಾಂತ್ಯದಿಂದ ಆರಂಭವಾಗಲಿರುವ ಗಣೇಶೋತ್ಸವದ ವೇಳೆ ಆಹಾರ ಪದಾರ್ಥ ಹಾಗೂ ಪ್ರಸಾದ ಸೇವೆಯ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ.
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಸಾರ್ವಜನಿಕ ಗಣೇಶೋತ್ಸವದ ಸಮಯದಲ್ಲಿ ನೀಡಲಾಗುವ ಪ್ರಸಾದದ ಗುಣಮಟ್ಟದ ಕುರಿತು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಸಾರ್ವಜನಿಕ ಗಣೇಶೋತ್ಸವದ ವೇಳೆ ನೀಡಲಾಗುವ ಪ್ರಸಾದದ ಗುಣಮಟ್ಟದ ಬಗ್ಗೆ FSSAI ನಿಂದ ಅನುಮತಿ ಪಡೆಯಬೇಕು. ಈ ರೀತಿಯ ಅನುಮತಿ ಪಡೆಯದೆ ಆಹಾರ ನೀಡಿದರೆ ಸಂಘಟಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಗಣೇಶೋತ್ಸವದ ವೇಳೆ ಪೆಂಡಾಲ್ ನ ಸುತ್ತಮುತ್ತಲಿನ ಪ್ರದೇಶ ಮತ್ತು ಕುಡಿಯುವ ನೀರಿನ ವಿಷಯದಲ್ಲಿ ಶುಚಿತ್ವ ಕಾಪಾಡಬೇಕು. FSSAIನಿಂದ ಅನುಮತಿ ಪಡೆಯದೇ ಪ್ರಸಾದ ವಿತರಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.




