ಹಾಸನ: ಗೃಹ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳನ್ನು ವಿತರಣೆ ಮಾಡುವ ಏಜೆನ್ಸಿಗಳು ಸ್ಥಳೀಯವಾಗಿ ಯಾವುದೇ ಸಮಸ್ಯೆಗಳು ಉದ್ಬವಿಸದಂತೆ ಎಚ್ಚರಿಕೆ ವಹಿಸಿ ಗ್ರಾಹಕರೊಂದಿಗೆ ಸ್ಪಂದಿಸಿ ಶಾಂತಿಯುತವಾಗಿ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.
- ಗ್ಯಾಸ್ ಏಜೆನ್ಸಿಗಳು ಗ್ರಾಹಕರೊಂದಿಗೆ ಸ್ಪಂದಿಸಿ ಶಾಂತಿಯುತವಾಗಿ ನಡೆದುಕೊಳ್ಳಿ: ಲತಾ ಕುಮಾರಿ
- ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ
- I welcome Modi finally opening his mouth on the proposed delimitation exercise: Siddaramaiah
- ಇತಿಹಾಸ ಸೃಷ್ಟಿಸಿದ ಕರ್ನಾಟಕ ರಾಜ್ಯ ರೈತ ಸಂಘ
- ಗೌರವ ಡಾಕ್ಟರೇಟ್ ತಿರಸ್ಕರಿಸಿದ ಬಸವರಾಜ ಬೊಮ್ಮಾಯಿ
ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಾಣಿಜ್ಯ/ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ಗಳ ಪೂರೈಕೆಯಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು ವಿತರಕರು ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆಮಾಡುವಂತೆ ಸೂಚಿಸಿದರು.
ಗೃಹ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗೆ ಬುಕಿಂಗ್ ಮಾಡಿದಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಅವಧಿಯೊಳಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಕ್ರಮವಹಿಸಲು ಸೂಚಿಸಿದರು. ಅಲ್ಲದೆ ದುರ್ಬಳಕೆ ಕಂಡು ಬಂದ್ದಲ್ಲಿ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಂಪನಿ, ವಿತರಕರು, ಬುಕ್ಕಿಂಗ್, ದಾಸ್ತಾನು ಲಭ್ಯ, ಎಷ್ಟು ಗ್ಯಾಪ್ ಇದೆ ಎಂಬುದರ ಮಾಹಿತಿಯನ್ನು ಪ್ರತಿದಿನದ ಮಾಹಿತಿ ಒದಗಿಸುವಂತೆ ಆಹಾರ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಹೆಚ್ಚುವರಿ ಪೊಲೀಸ್ ಶ್ರೀನಿಧಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಅರುಣ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಗ್ಯಾಸ್ ಏಜೆನ್ಸಿ ಮಾಲೀಕರು ಹಾಗೂ ಹೊಟೇಲ್ ಮಾಲೀಕರು ಸಭೆಯಲ್ಲಿ ಹಾಜರಿದ್ದರು.




