ಆಯುಷ್ಮಾನ್ ಭವ ಆರೋಗ್ಯ ಮೇಳಗಳ ಮೂಲಕ ಜಾಗೃತಿ
ಬಳ್ಳಾರಿ: 18 ವರ್ಷಗಳ ವಯಸ್ಸಿನ ನಂತರ ಹೆಣ್ಣು ಮಗಳಿಗೆ ಮದುವೆ ಮಾಡುವುದಕ್ಕೆ ಹೆಚ್ಚು ಒತ್ತು ನೀಡುವಂತೆ ಪೋಷಕರಿಗೆ ಜಾಗೃತಿ ನೀಡುವ ಕಾರ್ಯವು ಆಯುಷ್ಮಾನ್ ಭವ ಆರೋಗ್ಯ ಮೇಳಗಳಲ್ಲಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಹೇಳಿದರು.
18 ವರ್ಷ ಪೂರ್ವದಲ್ಲಿ ಮದುವೆಯಾದರೆ ಹೆಣ್ಣು ಮಗಳು ನಾನಾ ರೀತಿಯ ಸಮಸ್ಯೆಗಳಿಗೆ ಒಳಗಾಗುತ್ತಾಳೆ. ಈ ನಿಟ್ಟಿನಲ್ಲಿ 18 ವರ್ಷ ತುಂಬಿದ ನಂತರವೇ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಬೇಕು ಎಂದು ಪೋಷಕರಲ್ಲಿ ವಿನಂತಿಸಿದರು.
ಗರ್ಭಿಣಿಯಾದ ದಿನಂದಿಂದಲೆ ಗರ್ಭಿಣಿಯ ಆರೈಕೆಯನ್ನು ಕುಟುಂಬದ ಸದಸ್ಯರು ಸೂಕ್ತ ಕಾಳಜಿ ವಹಿಸಬೇಕು. ರಕ್ತಹೀನತೆ ಪರೀಕ್ಷೆ ಮಾಡಿಸಿ ಸೂಕ್ತ ಸಲಹೆ ಪಡೆಯುವುದರ ಜೊತೆಗೆ ಹೆರಿಗೆಯನ್ನು ಆಸ್ಪತ್ರೆಯಲ್ಲಿ ಮಾಡಿಸುವ ಮೂಲಕ ತಾಯಿ ಮಗುವಿನ ಸುರಕ್ಷತೆಗೆ ಪೋಷಕರು ಆದ್ಯತೆ ನೀಡಬೇಕು ಎಂದರು.
ಗರ್ಭಿಣಿ ಎಂದು ತಿಳಿದ ದಿನದಿಂದಲೇ ತಾಯಿಕಾರ್ಡ್ ಪಡೆದು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ರಕ್ತ ಹೀನತೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕನಿಷ್ಠ ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರಂತೆ ಸೇವಿಸಬೇಕು. ಸ್ಥಳೀಯವಾಗಿ ದೊರಕುವ ತಪ್ಪಲು ಪಲ್ಯ, ತರಕಾರಿ ಪದಾರ್ಥ ಆಹಾರವನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.
ಆರಂಭದಲ್ಲೇ ಗರ್ಭಿಣಿಯರಲ್ಲಿ ರಕ್ತಹೀನತೆಯನ್ನು ತಡೆಯುವ ಮೂಲಕ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಆಗುವುದನ್ನು ತಡೆಯುವುದಕ್ಕೆ ಎಲ್ಲರೂ ಪ್ರಯತ್ನಿಸಬೇಕು ಎಂದು ವಿನಂತಿಸಿದರು.
ಆಯುಷ್ಮಾನ್ ಭವ ಮೇಳಗಳು ಪ್ರತಿ ಮಂಗಳವಾರ ನಡೆಯುತ್ತಿರುವ ಹಿನ್ನಲೆಯಲ್ಲಿ ಶಿಬಿರದಲ್ಲಿ ಜೀವನ ಶೈಲಿಯ ರೋಗಗಳಾದ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ, ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ಕೆಮ್ಮು ಇದ್ದಲ್ಲಿ ಕ್ಷಯರೋಗ ಪರೀಕ್ಷೆ ಹಾಗೂ ರೋಗ ಲಕ್ಷಣಗಳು ಇರುವವರ ಕಫ ಪರೀಕ್ಷೆ ಕೈಗೊಳ್ಳಲಾಗುವುದು ಮತ್ತು ಇತರ ಸಾಮಾನ್ಯ ಆರೋಗ್ಯ ಸೇವೆಗಳನ್ನು ಸಹ ನೀಡಲಾಗುವುದು ಎಂದರು.
ಶಿಬಿರಗಳಲ್ಲಿ 05 ಲಕ್ಷದವರೆಗೆ ಬಿಪಿಎಲ್ ಕುಟುಂಬಗಳಿಗೆ ಉಚಿತ ಚಿಕಿತ್ಸಾ ವೆಚ್ಚ ಭರಿಸಲು ಅನಕೂಲವಾಗುವ ಆಯುಷ್ಮಾನ್ ಭವ-ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ- ಮುಖ್ಯಮಂತ್ರಿಯ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್, ಡಿಜಿಟಲ್ ಹೆಲ್ತ್ ಕಾರ್ಡ್ಗಂಳನ್ನು ಮೊಬೈಲ್ಗನಳ ಮೂಲಕ ಸೃಜಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಈಗಾಗಲೇ 3270 ಅಂಗಾಂಗ ದಾನ ನೋಂದಣಿ ಮಾಡಿಸಿದ್ದು, ರಾಜ್ಯ ಮಟ್ಟದಲ್ಲಿ ಬಳ್ಳಾರಿ ಜಿಲ್ಲೆಯು ಮುಂಚೂಣಿಯಲ್ಲಿದ್ದು, ನಿರಂತರ ನೋಂದಣಿಯನ್ನು ಸಹ ಮಾಡಿಕೊಳ್ಳಲಾಗುತ್ತಿದೆ. ಶಿಬಿರದಲ್ಲಿ ಡೆಂಗ್ಯು ಮತ್ತು ಚಿಕುನ್ಗು್ನ್ಯ ಕುಟುಂಬ ಕಲ್ಯಾಣ ವಿಧಾನಗಳು, ತಾಯಿ ಮಗುವಿನ ಆರೈಕೆ, ಮಾನಸಿಕ ಆರೋಗ್ಯ ಸಲಹೆಗಾಗಿ ಟೆಲಿ ಮನಸ್ ಮಾನಸಿಕ ಆರೋಗ್ಯ ಸಹಾಯವಾಣಿ ಸಂಖ್ಯೆ 14416 ಕುರಿತು ಮಾಹಿತಿಯನ್ನೂ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್, ಮೊಬೈಲ್ ಹಾಗೂ ಈ ಹಿಂದೆ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಪಡೆದ ಚೀಟಿಗಳಿದ್ದರೆ ತಂದು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.




