ಕೊವಿಡ್ ಲಸಿಕೆ ಹಾಕಿಸಿಕೊಂಡು ಕೊರೊನ ಮುಕ್ತ ಭಾರತ ನಿರ್ಮಿಸಿ: ವಿ.ಸೋಮಣ್ಣ

5 years ago

ಬೆಂಗಳೂರು: ಸಾರ್ವಜನಿಕರು ಆರೋಗ್ಯ ಇಲಾಖೆಯ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್ ಧರಿಸಿ ಅವ್ಯಶಕತೆ ಇದ್ದಲ್ಲಿ ಮನೆಯಿಂದ ಹೊರಬನ್ನಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಇದರಿಂದ ಕೊರೋನ ವೈರಸ್ ಹರಡದಂತೆ ತಡೆಗಟ್ಟಬಹುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ವಿಕ್ಟೋರಿಯಾ ಆಸ್ಪತ್ರೆಯ ಹೆಚ್ ಬ್ಲಾಕ್ ನಲ್ಲಿ ಎರಡನೆ ಡೋಸ್ ಕೋವಿಡ್-19 ಲಸಿಕೆಯನ್ನು ಪಡೆದ ನಂತರ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರಮೋದಿ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕೊವಿಡ್-19 ಲಸಿಕಾ ಕಾರ್ಯಕ್ರಮ ಯಶ್ವಸಿಯಾಗಿ ನಡೆಯುತ್ತಿದೆ ಎಂದರು.

ದೇಶದಲ್ಲಿ 13 ಕೋಟಿಗೂ ಹೆಚ್ಚು ಜನ ಲಸಿಕೆ ಹಾಕಿಸಿಕೊಂಡಿದ್ದಾರೆ. ಮೇ 1ನೇ ತಾರೀಖಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ಹಾಕಲಾಗುವುದು. ಆತಂಕಬಿಡಿ, ಲಸಿಕೆ ಹಾಕಿಸಿಕೊಳ್ಳಿ. ಕೊರೋನ ವೈರಸ್ ಮುಕ್ತ ಭಾರತ ಹೋರಾಟದಲ್ಲಿ ಭಾಗಿಯಾಗಿ ಎಂದು ಕರೆ ನಿಡಿದರು.

ಅಧೀಕ್ಷಕ ಡಾ. ರಮೇಶ್ ಕೃಷ್ಣ, ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷ ವಿಶ್ವನಾಥಗೌಡ ಮತ್ತು ತಜ್ಞ ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply