ಬೆಂಗಳೂರು: ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವೇ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕಾಂಗ್ರೆಸ್ ಮಿತ್ರಪಕ್ಷ ಡಿಎಂಕೆ ಪ್ರಣಾಳಿಕೆ ಬಿಡುಗಡೆ ನಂತರ ಕಾವೇರಿ ವಿವಾದವನ್ನು ಕೆಣಕಿರುವ ಬಿಜೆಪಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚೆನ್ನೈ ಸೂಪರ್ ಕಿಂಗ್ಸ್ ಜರ್ಸಿ ತೊಟ್ಟಿರುವಂತೆ ಫೋಟೋಗಳನ್ನು ರಚಿಸಿ, ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿತ್ತು.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು ಎಂದಿದ್ದಾರೆ.
ನಿಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಾರೆ, ಮೇಕೆದಾಟು ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಕೂರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದು, ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪವಾಸ ನಡೆಸಿದ ಸುದ್ದಿಯ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ತಿರುಗೇಟು ಕೊಟ್ಟಿದ್ದಾರೆ.

ಜೊತೆಗೆ, ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು. ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ ಆರಂಭ ಮಾಡಲು ನಾವು ತಯಾರಿದ್ದೇವೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂಬ ಸುಳ್ಳು ಸುದ್ದಿಯ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ ಎಂದಿದ್ದಾರೆ.

BJP Karnataka ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ, “ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ” ಎಂದಿದ್ದಾರೆ.



